ಬಳ್ಳಾರಿ, 04 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಆರ್.ಪಾಟೀಲ ಅವರು ನಾಳೆ ಹೊಸಪೇಟೆಯಿಂದ ಬಳ್ಳಾರಿಗೆ ಆಗಮಿಸಲಿದ್ದಾರೆ.
ನಾಳೆ ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ವತಿಯಿಂದ ಚೇಂಬರ್ ಆಫ್ ಕಾಮರ್ಸ್ ನ ಆವರಣದಲ್ಲಿ ಏರ್ಪಡಿಸಿರುವ ಇಂಕ್ಯುಬೇಶನ್ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಮಧ್ಯಾಹ್ನ 12.30 ಕ್ಕೆ ನಗರದ ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವರು.
ನಂತರ ಹೊಸಪೇಟೆಗೆ ತೆರಳಿ ವಾಸ್ತವ್ಯ ಮಾಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್