ನವದೆಹಲಿ, 04 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಗಾಜಾದಲ್ಲಿ ಶಾಂತಿ ಸ್ಥಾಪನೆಗಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೈಗೊಂಡ ಪ್ರಯತ್ನಗಳನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಅವರು, “ಗಾಜಾದಲ್ಲಿ ಶಾಂತಿ ಪ್ರಯತ್ನಗಳಲ್ಲಿ ನಿರ್ಣಾಯಕ ಪ್ರಗತಿ ಸಾಧಿಸುವಲ್ಲಿ ಅಧ್ಯಕ್ಷ ಟ್ರಂಪ್ ಅವರ ನಾಯಕತ್ವವನ್ನು ನಾವು ಸ್ವಾಗತಿಸುತ್ತೇವೆ. ಒತ್ತೆಯಾಳುಗಳ ಬಿಡುಗಡೆ ಮಾನವೀಯ ಮತ್ತು ರಾಜತಾಂತ್ರಿಕ ಪ್ರಯತ್ನಗಳಲ್ಲಿ ಪ್ರಮುಖ ಹೆಜ್ಜೆಯಾಗಿದೆ” ಎಂದು ತಿಳಿಸಿದ್ದಾರೆ.
ದೀರ್ಘಕಾಲೀನ ಮತ್ತು ನ್ಯಾಯಯುತ ಶಾಂತಿಗಾಗಿ ಭಾರತ ಎಲ್ಲ ಸಕಾರಾತ್ಮಕ ಉಪಕ್ರಮಗಳನ್ನು ಬಲವಾಗಿ ಬೆಂಬಲಿಸುತ್ತದೆ ಎಂದು ಮೋದಿ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa