ಬೇಂದ್ರೆ ರಾಷ್ಟ್ರೀಯ ಸ್ಮಾರಕ ವತಿಯಿಂದ ಸಂಗೀತ ಮತ್ತು ನೃತ್ಯ ಕಾರ್ಯಕ್ರಮ
ಧಾರವಾಡ, 04 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಧಾರವಾಡ ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಅಕ್ಟೋಬರ್ 05, 2025 ರಂದು ಸಂಜೆ 5 ಗಂಟೆಗೆ ಧಾರವಾಡ ಸಾಧನಕೇರಿಯ ಡಾ.ದ.ರಾ.ಬೇಂದ್ರೆ ಭವನದಲ್ಲಿ ವಿಶೇಷ ಉಪನ್ಯಾಸ, ಸಂಗೀತ ಮತ್ತು ನೃತ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾಹಿತಿ ಡಾ.
ಬೇಂದ್ರೆ ರಾಷ್ಟ್ರೀಯ ಸ್ಮಾರಕ ವತಿಯಿಂದ ಸಂಗೀತ ಮತ್ತು ನೃತ್ಯ ಕಾರ್ಯಕ್ರಮ


ಧಾರವಾಡ, 04 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಧಾರವಾಡ ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಅಕ್ಟೋಬರ್ 05, 2025 ರಂದು ಸಂಜೆ 5 ಗಂಟೆಗೆ ಧಾರವಾಡ ಸಾಧನಕೇರಿಯ ಡಾ.ದ.ರಾ.ಬೇಂದ್ರೆ ಭವನದಲ್ಲಿ ವಿಶೇಷ ಉಪನ್ಯಾಸ, ಸಂಗೀತ ಮತ್ತು ನೃತ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸಾಹಿತಿ ಡಾ. ಕೃಷ್ಣ ಕಟ್ಟಿ ಅವರು ಬೇಂದ್ರೆಯವರ ಕಾವ್ಯದಲ್ಲಿ ಮಾತೃಕೆಯರು ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡುವರು. ಟ್ರಸ್ಟ್ ಅಧ್ಯಕ್ಷ ಡಾ. ಸರಜೂ ಕಾಟ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ನಾದಸುರಭಿ ಸಾಂಸ್ಕೃತಿಕ ಅಕಾಡೆಮಿಯ ಡಾ. ಜ್ಯೋತಿಲಕ್ಷ್ಮೀ ಕೂಡ್ಲಿಗಿ ಮತ್ತು ವೃಂದದವರು ಡಾ.ದ.ರಾ.ಬೇಂದ್ರೆಯವರ ಗೀತೆಗಳ ಗಾಯನ ಪ್ರಸ್ತುತ ಪಡಿಸುವರು.

ಭರತ ನೃತ್ಯ ಅಕಾಡೆಮಿಯ ವಿದ್ವಾನ್ ರಾಜೇಂದ್ರ ಟೊಣಪಿ ಮತ್ತು ತಂಡದವರು ಬೇಂದ್ರೆಯವರ ಗೀತೆಗಳಿಗೆ ನೃತ್ಯ ಕಾರ್ಯಕ್ರಮ ನೀಡುವರು. ಕಾರ್ಯಕ್ರಮದಲ್ಲಿ ಟ್ರಸ್ಟ್ ಸದಸ್ಯರು ಹಾಗೂ ಹಿರಿಯ ಸಾಹಿತಿಗಳು ಭಾಗವಹಿಸುವರು ಎಂದು ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande