ಸಫಾಯಿ ಕರ್ಮಚಾರಿಗಳಿಗೆ ಅಗತ್ಯ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿ ನಿತೀಶ್ ಕೆ. ಸೂಚನೆ
ರಾಯಚೂರು, 04 ಅಕ್ಟೋಬರ್(ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿನ ಸಫಾಯಿ ಕರ್ಮಚಾರಿಗಳಿಗೆ ವಸತಿ ಮತ್ತು ಪುನರ್ವಸತಿ ಹಾಗೂ ಪೌರ ಕಾರ್ಮಿಕರಿಗೆ ಸವಲತ್ತು ಒದಗಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಕ್ಟೋಬರ್ ಶನಿವಾರ ನಗರದ ನೂತನ
ಸಫಾಯಿ ಕರ್ಮಚಾರಿಗಳಿಗೆ ಅಗತ್ಯ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿ ನಿತೀಶ್ ಕೆ. ಸೂಚನೆ


ರಾಯಚೂರು, 04 ಅಕ್ಟೋಬರ್(ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿನ ಸಫಾಯಿ ಕರ್ಮಚಾರಿಗಳಿಗೆ ವಸತಿ ಮತ್ತು ಪುನರ್ವಸತಿ ಹಾಗೂ ಪೌರ ಕಾರ್ಮಿಕರಿಗೆ ಸವಲತ್ತು ಒದಗಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಕ್ಟೋಬರ್ ಶನಿವಾರ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ / ಸಫಾಯಿ ಕರ್ಮಚಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ನಿಗದಿಪಡಿಸಿದ ವೇತನ ಪಾವತಿಸುವುದು ಹಾಗೂ ಸೌಲಭ್ಯಗಳನ್ನು ದೊರಕಿಸಿಕೊಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಗುತ್ತಿಗೆ ಸಫಾಯಿ ಕರ್ಮಚಾರಿಗಳಿಗೆ ಗುತ್ತಿಗೆ ಏಜೆನ್ಸಿದಾರರು ಸಮಯಕ್ಕೆ ಸರಿಯಾಗಿ ನಿಗದಿಪಡಿಸಿದ ವೇತನ ಸೌಲಭ್ಯಗಳನ್ನು ವಿತರಿಸುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಹಾಗೂ ವೇತನದೊಂದಿಗೆ ಇಎಸ್‍ಐ, ಪಿಎಫ್ ಪಾವತಿಸುವ ಬಗ್ಗೆ ಪರಿಶೀಲಿಸಿ ನಿಯಮಾನುಸಾರ ಇದ್ದಲ್ಲಿ ಮಾತ್ರವೇ ಗುತ್ತಿಗೆದಾರರಿಗೆ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದರು.

ಮ್ಯಾನ್ಯುಯಲ್ ಸ್ಕ್ಯಾವೆಂಜರ್/ ಸಫಾಯಿ ಕರ್ಮಚಾರಿಗಳ ಪ್ರಮುಖ ಬೇಡಿಕೆಯಾದ ನಗರದ ಸಿಯಾತಲಾಬ್‍ನಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನವನ್ನು ಆದಷ್ಟು ಬೇಗನೆ ಮುಗಿಸಬೇಕು ಎಂದು ಸಫಾಯಿ ಕರ್ಮಚಾರಿಗಳು ಮನವಿ ಮಾಡಿದರು. ಭವನ ನಿರ್ಮಾಕ್ಕಾಗಿ ಕೆಕೆಆರ್‍ಡಿಬಿಯ ಅನುದಾನದಲ್ಲಿ ಕಾಮಗಾರಿ ಪ್ರಗತಿ ಹಂತದಲ್ಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಶೈಕ್ಷಣಿಕ ಸೌಲಭ್ಯ: ವಾರ್ಷಿಕ ಆದಾಯ ಪ್ರಮಾಣವು 2.50 ಲಕ್ಷ ರೂ.ಗಿಂತ ಕಡಿಮೆ ಇರುವ ಎಸ್.ಸಿ.ಎಸ್.ಪಿ ಮ್ಯಾನ್ಯುವೆಲ್ ಸ್ಯಾವೆಂಜರ್ಸ್ ಕುಟುಂಬಗಳ ಮಕ್ಕಳ ವಿಧ್ಯಾಭ್ಯಾಸದ ಪ್ರವೇಶ ಶುಲ್ಕವನ್ನು ಭರಿಸಲು

ನಗರಸಭೆಯಲ್ಲಿ ಅನುದಾನ ಮೀಸಲಿಡಲು ಕ್ರಮ ವಹಿಸುವುದಾಗಿ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ., ಐಎಎಸ್ ಪೆÇ್ರಬೆಷನರಿ ಅಧಿಕಾರಿ ಪುರುರಾಜ್ ಸಿಂಗ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ವಿಜಯಶಂಕರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಸಿಂಧು, ಸಮಿತಿ ಸದಸ್ಯರಾದ ಮಂಜುನಾಥ, ನೀಲಕಂಠ, ಶಾಂತಪ್ಪ, ಅನಿತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande