ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ
ಗದಗ, 04 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮುಖ್ಯ ಚುನಾವಣಾಧಿಕಾರಿಗಳು, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿಂದು ರಂದು ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳ, ಸಹಾಯಕ ಮತದಾರರ ನೋಂದಾಣಾಧಿಕಾರಿಗಳ ವಿಡಿಯೋ ಸಂವಾಧ ಮೂಲಕ ಸಭೆಯನ್ನು ಜರುಗಿಸಲಾಗಿರುತ್ತದೆ. ಸಭೆಯಲ್ಲಿ ಈಗಾಗಲೇ ನೇಮಕಾ
ಪೋಟೋ


ಗದಗ, 04 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮುಖ್ಯ ಚುನಾವಣಾಧಿಕಾರಿಗಳು, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿಂದು ರಂದು ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳ, ಸಹಾಯಕ ಮತದಾರರ ನೋಂದಾಣಾಧಿಕಾರಿಗಳ ವಿಡಿಯೋ ಸಂವಾಧ ಮೂಲಕ ಸಭೆಯನ್ನು ಜರುಗಿಸಲಾಗಿರುತ್ತದೆ.

ಸಭೆಯಲ್ಲಿ ಈಗಾಗಲೇ ನೇಮಕಾತಿ ಹೊಂದಿದ ಸಹಾಯಕ ಮತದಾರರ ನೋಂದಾಣಾಧಿಕಾರಿಗಳು, ನಿಯೋಜಿತ ಅಧಿಕಾರಿಗಳ ಕಚೇರಿಗಳಲ್ಲಿ ಸಾಕಾಷ್ಟು ಸಂಖ್ಯೆಯಲ್ಲಿ ನಮೂನೆ-18 ರ ಅರ್ಜಿ ಫಾರ್ಮಗಳು ಲಭ್ಯವಿದ್ದು, ಸದರಿ ಅರ್ಜಿಗಳನ್ನು ಅರ್ಹ ಎಲ್ಲ ಪದವೀಧರರು ಪಡೆದು, ಅದರೊಂದಿಗೆ ಸರಿಯಾದ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಸದರಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ನಿರ್ದೇಶಿಸಿರುತ್ತಾರೆ.

ಹೊಸ ಮತದಾರರ ಪಟ್ಟಿ ತಯಾರಿಕೆಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳು/ ಉಪವಿಭಾಗಾಧಿಕಾರಿಗಳು/ ತಹಶೀಲ್ದಾರರ ಕಚೇರಿಗಳಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲು ನಿರ್ದೇಶಿಸಿರುತ್ತಾರೆ.

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಹೊಸದಾಗಿ ತಯಾರಿಸುತ್ತಿರುವ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ನೋಂದಾಯಿಸಲು ಸಾರ್ವಜನಿಕರಿಗೆ, ಮತದಾರರಿಗೆ ಅಗತ್ಯ ಜಾಗೃತಿ ಮೂಡಿಸಲು ನಿರ್ದೇಶನ ನೀಡಿರುತ್ತಾರೆ. ಸದರಿ ಸಭೆಯಲ್ಲಿ ಮುಖ್ಯ ಚುನಾವಣಾಧಿಕಾರಿಗಳು ನೀಡಿದ ನಿರ್ದೇಶನದಂತೆ ಅಗತ್ಯ ಕ್ರಮಕೈಗೊಳ್ಳಲು ಜಿಲ್ಲಾ ಚುನಾವಣಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಇವರಿಗೆ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ನೋಂದಾಣಾಧಿಕಾರಿ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಶ್ರೀಮತಿ ಕೆ.ಎಂ ಜಾನಕಿ ಇವರು ಸೂಚನೆ ನೀಡಿರುತ್ತಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande