ನವದೆಹಲಿ, 04 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದಾದ್ಯಂತ ಯುವಕರಿಗೆ 62,000 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ನವದೆಹಲಿ ವಿಜ್ಞಾನ ಭವನದಲ್ಲಿ ಚಾಲನೆ ನೀಡಲಿದ್ದಾರೆ.
ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶಗಳನ್ನು ಉತ್ತೇಜಿಸುವ ಉದ್ದೇಶದಿಂದ ಈ ಯೋಜನೆಗಳನ್ನು ಪ್ರಾರಂಭಿಸಲಾಗುತ್ತಿದೆ.
ಪಿಎಂ-ಸೆಟು ಯೋಜನೆಯಡಿ 60,000 ಕೋಟಿ ವೆಚ್ಚದಲ್ಲಿ 1,000 ಸರ್ಕಾರಿ ಐಟಿಐಗಳನ್ನು ಆಧುನೀಕರಿಸಲಾಗುತ್ತಿದೆ. ಹಬ್-ಅಂಡ್-ಸ್ಪೋಕ್ ಮಾದರಿಯಲ್ಲಿ ಜಾರಿಗೆ ಬರುವ ಈ ಯೋಜನೆಗೆ ವಿಶ್ವ ಬ್ಯಾಂಕ್ ಹಾಗೂ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ಬೆಂಬಲ ನೀಡುತ್ತಿವೆ.
ಇದೆ ವೇಳೆ 34 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 400 ನವೋದಯ ವಿದ್ಯಾಲಯಗಳು ಹಾಗೂ 200 ಏಕಲವ್ಯ ಮಾದರಿ ಶಾಲೆಗಳಲ್ಲಿ 1,200 ಕೌಶಲ್ಯ ಲ್ಯಾಬ್‌ಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಕೃಷಿ, ಐಟಿ, ಆಟೋಮೊಬೈಲ್, ಎಲೆಕ್ಟ್ರಾನಿಕ್ಸ್, ಲಾಜಿಸ್ಟಿಕ್ಸ್, ಪ್ರವಾಸೋದ್ಯಮ ಸೇರಿ 12 ಕ್ಷೇತ್ರಗಳಲ್ಲಿ ತರಬೇತಿ ನೀಡಲಾಗುವುದು.
ಪ್ರಧಾನಿ ಮೋದಿ ಎನ್ಐಟಿ ಪಾಟ್ನಾದ ಬಿಹ್ತಾ ಕ್ಯಾಂಪಸ್‌ನ್ನೂ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. 6,500 ವಿದ್ಯಾರ್ಥಿಗಳ ಸಾಮರ್ಥ್ಯದ ಈ ಸಂಸ್ಥೆ 5G ಲ್ಯಾಬ್, ಇಸ್ರೋ ಸಹಭಾಗಿತ್ವದ ಬಾಹ್ಯಾಕಾಶ ಸಂಶೋಧನಾ ಕೇಂದ್ರ ಮತ್ತು ನಾವೀನ್ಯತೆ ಕೇಂದ್ರವನ್ನು ಹೊಂದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa