ಸಾಂಬಾ, 04 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ಹಾರಾಟ ನಡೆಸಿರುವುದು ಪತ್ತೆಯಾಗಿದೆ.
ಗಡಿ ಪ್ರದೇಶದ ಹಳ್ಳಿಯ ಮೇಲೆ ಡ್ರೋನ್ ಹಾರಾಟ ನಡೆಸಿರುವುದು ಕಂಡು ಬಂದ ಬಳಿಕ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದು, ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಅಧಿಕಾರಿಗಳು, ಡ್ರೋನ್ ಯಾವುದೇ ಮಾದಕ ದ್ರವ್ಯ ಅಥವಾ ಶಸ್ತ್ರಾಸ್ತ್ರ ಬೀಳಿಸುವ ಸಾಧ್ಯತೆಯನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa