ರಾಯಚೂರು, 04 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಶಾಸಕರಾದ ಬಸನಗೌಡ ದದ್ದಲ್ ಅವರು ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ತುಂಗಭದ್ರಾ ಗ್ರಾಮಕ್ಕೆ ಭೇಟಿ ನೀಡಿ, ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಗ್ರಾಮದ ದೇವಪ್ಪ ತಂದೆ ನರಸಪ್ಪ ಅವರ ಕುಟುಂಬದವರಿಗೆ ಶಾಸಕರು 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು.ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರು, ಸುತ್ತಲಿನ ಗ್ರಾಮಗಳ ಹಿರಿಯ ಮುಖಂಡರು, ನಾಮ ನಿರ್ದೇಶಿತ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್