ಕೊಪ್ಪಳ, 04 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸರ್ಕಾರಿ ನಿವೃತ್ತ ನೌಕರರ ಸಂಘಗಳ ಸಂಯುಕ್ತಾಶ್ರಯದಲ್ಲಿ ಅ.10 ರಂದು ಬೆಳಿಗ್ಗೆ 11.30 ಗಂಟೆಗೆ ಕೊಪ್ಪಳ ಜಿಲ್ಲಾಡಳಿತ ಭವನದ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2025 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಉದ್ಘಾಟಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.
ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ ಹಾಗೂ ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಎಸ್.ಎಂ.ಪಟೇಲ್, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ ಗುಪ್ತಾ, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಉಪಸ್ಥಿತರಿರುವರು.
ವಿಶೇಷ ಆಹ್ವಾನಿತರಾಗಿ ವಸತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ, ಕೃಷ್ಣಭಾಗ್ಯ ಜಲನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ, ಕೃಷ್ಣಾ ಮೇಲ್ದಂಡೆ ಯೋಜನೆಯ ಆಯುಕ್ತರು ಮತ್ತು ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನರಾಜ್, ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ ಅವರು ಭಾಗವಹಿಸುವರು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವೈ.ಶೆಟ್ಟೆಪ್ಪನವರ್ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೆಂಕಟೇಶ ದೇಶಪಾಂಡೆ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್