ದೇವದಾಸಿ ಮಹಿಳೆಯರ ಮರು ಸಮೀಕ್ಷೆಗೆ ಅರ್ಜಿ ಅಹ್ವಾನ
ಗದಗ, 05 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಡೆಸಲಾಗುತ್ತಿರುವ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯಲ್ಲಿ ಭಾಗವಹಿಸಲು ಬಯಸುವ ಮಹಿಳೆಯರು ಮತ್ತು ಕುಟುಂಬಗಳಿಂದ ನಿಗಧಿತನ ನಮೂನೆಗಳಲ್ಲಿ ಅರ್ಜಿ ಅಹ್ವಾನಿಸಲಾಗಿದೆ. ಗದಗ ಜಿಲ್ಲೆಯಲ್ಲಿ ಮಾಜಿ ದೇ
ಪೋಟೋ


ಗದಗ, 05 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಡೆಸಲಾಗುತ್ತಿರುವ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯಲ್ಲಿ ಭಾಗವಹಿಸಲು ಬಯಸುವ ಮಹಿಳೆಯರು ಮತ್ತು ಕುಟುಂಬಗಳಿಂದ ನಿಗಧಿತನ ನಮೂನೆಗಳಲ್ಲಿ ಅರ್ಜಿ ಅಹ್ವಾನಿಸಲಾಗಿದೆ.

ಗದಗ ಜಿಲ್ಲೆಯಲ್ಲಿ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ-2025 ಯನ್ನು ಕೈಗೊಂಡಿದ್ದು, ಈಗಾಗಲೇ ಸರ್ಕಾರದಿಂದ 1993-94 ಮತ್ತು 2007-08 ನೇ ಸಾಲಿನಲ್ಲಿ ನಡೆಸಲಾದ ಸಮೀಕ್ಷೆಯ ಇದ್ದು, ಮರಣ ಹೊಂದಿರುವ ಮಹಿಳೆಯ ಕುಟುಂಬದ ಅಧೀಕೃತ ಸದಸ್ಯರು ನಮೂನೆ-1 ರಲ್ಲಿ, ಅರ್ಜಿ ಸಲ್ಲಿಸಬೇಕು.

ಈ ಹಿಂದೆ 1993-94 ಮತ್ತು 2007-08 ನೇ ಸಾಲಿನಲ್ಲಿ ನಡೆಸಲಾದ ಸಮೀಕ್ಷೆಯಲ್ಲಿ ಹೊರಗುಳಿದ ಹಾಲಿ ಜೀವಂತವಿರುವ ಹೊಸದಾಗಿ ದೇವದಾಸಿ ಪಟ್ಟಿಗೆ ಸೇರ್ಪಡೆ ಬಯಸುವ ದೇವದಾಸಿ ಮಹಿಳೆಯರು ನಮೂನೆ-2 ರಲ್ಲಿ ಸಲ್ಲಿಸಬೇಕು.

ಈ ಹಿಂದೆ 1993-94 ಮತ್ತು 2007-08 ನೇ ಸಾಲಿನಲ್ಲಿ ನಡೆಸಲಾದ ಸಮೀಕ್ಷೆಯಲ್ಲಿ ಹೊರಗುಳಿದ ಮತ್ತು ಪ್ರಸ್ತುತ ಮರಣ ಹೊಂದಿರುವ ಮಹಿಳೆಯರ ಕುಟುಂಬದ ಅಧೀಕೃತ ಸದಸ್ಯರು ನಮೂನೆ-3 ರಲ್ಲಿ ಅರ್ಜಿಯನ್ನು ಭರ್ತಿಮಾಡಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಮಹಿಳೆಯ ಆಧಾರ ಕಾರ್ಡ, ಮಹಿಳೆಯ ಮರಣ ಪ್ರಮಾಣ ಪತ್ರ, ವಂಶವೃಕ್ಷ, ಕುಟುಂಬದ ಅಧೀಕೃತ ಸದಸ್ಯರ ಆಧಾರಕಾರ್ಡ ಮತ್ತು ಹೊಸ ಸೇರ್ಪಡೆ ಬಯಸುವ ಮಹಿಳೆಯರ ವಯಸ್ಸಿನ ದೃಢೀಕರಣ ಪತ್ರಗಳೊಂದಿಗೆ ಅರ್ಜಿಯನ್ನು ಸಂಬದಧಪಟ್ಟ ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಅಕ್ಟೋಬರ್ 03. 2025 ರಿಂದ ಅಕ್ಟೋಬರ್ 17. 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ ಜಿಲ್ಲಾ ಮಟ್ಟದ ಸಮಿಕ್ಷೆಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ವಿಳಾಸ ಜಿಲ್ಲೆಯ ಎಲ್ಲಾ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಮತ್ತು ಉಪ ನಿರ್ದೇಶಕರ ಕಛೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದೇವದಾಸಿ ಪುನರ್ವಸತಿ ಯೋಜನೆ, ಗದಗ ವಿಶ್ವೇಶ್ವರಯ್ಯ ನಗರ, ಕಳಸಾಪೂರ ರೋಡ, ಸಾಯಿ ಯೋಗಾಶ್ರಮ ಹತ್ತಿರ, ಗದಗ ದೂ.ಸಂ 08372-452099 ಸಂಪರ್ಕಿಸಬೇಕೆಂದು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande