ಹಾಸನ, 05 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ ರೂ. 25,000 ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1 ಲಕ್ಷಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರಧಾನ ಮಾಡಿ ಗೌರವಿಸಲಾಗುತ್ತದೆ.
2025ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಸನ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಅ.10 ರ ಒಳಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಸನ ಇವರಿಗೆ ಸಲ್ಲಿಸುವುದು, ನಿಗಧಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣೆ ಸಂಖ್ಯೆ:08172 267218ನ್ನು ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa