ನವದೆಹಲಿ, 05 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಸಂಭವಿಸಿದ ಸೇತುವೆ ಕುಸಿತದಲ್ಲಿ ಜನರು ಸಾವನ್ನಪ್ಪಿದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
“ಡಾರ್ಜಿಲಿಂಗ್‌ನಲ್ಲಿ ಸೇತುವೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯಿಂದ ತೀವ್ರ ನೋವುಂಟಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ,” ಎಂದು ಪ್ರಧಾನಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಭಾರೀ ಮಳೆ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ಡಾರ್ಜಿಲಿಂಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa