ನಾಳೆ ರೂ. 2000 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ
ಕೊಪ್ಪಳ, 05 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೊಪ್ಪಳ ಇವರ ಸಹಯೋಗದಲ್ಲಿ ``ಕೊಪ್ಪಳ ಜಿಲ್ಲಾ ವ್ಯಾಪ್ತಿಯ ರೂ. 2000 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರ
ನಾಳೆ ರೂ. 2000 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ


ಕೊಪ್ಪಳ, 05 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೊಪ್ಪಳ ಇವರ ಸಹಯೋಗದಲ್ಲಿ ``ಕೊಪ್ಪಳ ಜಿಲ್ಲಾ ವ್ಯಾಪ್ತಿಯ ರೂ. 2000 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮ''ವನ್ನು ಅಕ್ಟೋಬರ್ 6 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಮಾರುತಿ ಸುಜೂಕಿ ಶೋ ರೂಂ ಎದುರುಗಡೆಯ ಅಗಡಿ ಲೇಔಟನಲ್ಲಿ ಆಯೋಜಿಸಲಾಗಿದೆ.

ರಾಜ್ಯ ಸಭೆಯ ಪ್ರತಿ ಪಕ್ಷದ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ ಅವರು ಪಾಲ್ಗೊಳ್ಳುವರು.

ರಾಜ್ಯ ಸಭೆ ಸದಸ್ಯರಾದ ರಣದೀಪ್ ಸಿಂಗ್ ಸುರ್ಜೇವಾಲಾ, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಮತ್ತು ಕೊಪ್ಪಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಗೌರವಾನ್ವಿತ ಉಪಸ್ಥಿತಿ ವಹಿಸುವರು.

ಸಮಾರಂಭದಲ್ಲಿ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್, ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿ, ಇಂಧನ ಇಲಾಖೆಯ ಸಚಿವರಾದ ಕೆ.ಜೆ ಜಾರ್ಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಝಡ್.ಜಮೀರ್ ಅಹ್ಮದ್ ಖಾನ್, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ಯಮಗಳ ಇಲಾಖೆಯ ಸಚಿವರಾದ ಶರಣಬಸಪ್ಪ ದರ್ಶನಾಪುರ, ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಸಚಿವರಾದ ಈಶ್ವರ ಖಂಡ್ರೆ, ಕೃಷಿ ಇಲಾಖೆಯ ಸಚಿವರಾದ ಎನ್.ಚೆಲುವರಾಯಸ್ವಾಮಿ, ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಇಲಾಖೆಯ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಪೌರಾಡಳಿತ ಹಾಗೂ ಹಜ್ ಇಲಾಖೆಯ ಸಚಿವರಾದ ರಹೀಂ ಖಾನ್, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವ ವಿಜ್ಞಾನ ಇಲಾಖೆ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವರಾದ ಡಿ.ಸುಧಾಕರ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಇಲಾಖೆಯ ಸಚಿವರಾದ ಸುರೇಶ ಬಿ.ಎಸ್., ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವರಾದ ಎಸ್. ಮಧು ಬಂಗಾರಪ್ಪ, ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಾಜ್ಞಾನ ಇಲಾಖೆಯ ಸಚಿವರಾದ ಎನ್.ಎಸ್. ಬೋಸರಾಜು, ಕರ್ನಾಟಕ ವಿಧಾನ ಸಭೆಯ ಪ್ರತಿ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹನಮಗೌಡ ಪಾಟೀಲ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ. ಅಜಯ ಧರ್ಮಸಿಂಗ್ ಅವರು ಉಪಸ್ಥಿತರಿರುವರು

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande