ಬೆಂಗಳೂರು, 05 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಿಷಭ್ ಶೆಟ್ಟಿ ನಟಿಸಿ, ನಿರ್ದೇಶಿಸಿದ 'ಕಾಂತಾರ ಚಾಪ್ಟರ್ ಒನ್ ಚಿತ್ರ ಬೆಂಗಳೂರಿನಲ್ಲಿ ಭರ್ಜರಿ ಯಶಸ್ಸು ಗಳಿಸುತ್ತಿದೆ ಬಿಡುಗಡೆಯಾದ ನಾಲ್ಕನೇ ದಿನ, ಅಕ್ಟೋಬರ್ 5ರಂದು, ಚಿತ್ರ 1,178 ಪ್ರದರ್ಶನ ಕಂಡಿದ್ದು ಹೊಸ ಇತಿಹಾಸ ಸೃಷ್ಟಿಸಿ ತನ್ನದೇ ಹಿಂದಿನ ದಾಖಲೆಯನ್ನು ಮುರಿದಿದೆ.
ಬಿಡುಗಡೆಯಾದ ಮೂರನೇ ದಿನ ಬೆಂಗಳೂರಿನಲ್ಲಿ 1,052 ಪ್ರದರ್ಶನಗಳು ನಡೆದವು. ಅಕ್ಟೋಬರ್ 2 ರಂದು ಬಿಡುಗಡೆಯಾದ ಈ ಚಿತ್ರ, ದಿನದಿಂದ ದಿನಕ್ಕೆ ಪ್ರದರ್ಶನಗಳ ಸಂಖ್ಯೆಯನ್ನು ಹೆಚ್ಚಿಸುತ್ತಿದೆ.
ಚಿತ್ರ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾದ ಹಿನ್ನೆಲೆಯಲ್ಲಿ, ಪ್ರದರ್ಶನಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa