ಸೋರುತ್ತಿರುವ ಪಟ್ಟಣ ಪಂಚಾಯತಿ ಕಟ್ಟಡ ದಾಖಲೆಗಳಿಗೆ ರಕ್ಷಣೆ ಇಲ್ಲ
ಗದಗ, 05 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಬೇಕಾದ ಪಂಚಾಯಿತಿ ಕಚೇರಿ ಸ್ವತಃ ಬೃಹತ್ ಸಮಸ್ಯೆಯಾಗಿದೆ. ಸುಮಾರು 119 ವರ್ಷಗಳ ಹಳೆಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಹಟ್ಟಿ ಪಟ್ಟಣ ಪಂಚಾಯಿತಿಯಲ್ಲಿ ಮೇಲ್ಛಾವಣಿ ರಂದ್ರಗಳಿಂದ ನೀರು
ಪೋಟೋ


ಗದಗ, 05 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಬೇಕಾದ ಪಂಚಾಯಿತಿ ಕಚೇರಿ ಸ್ವತಃ ಬೃಹತ್ ಸಮಸ್ಯೆಯಾಗಿದೆ. ಸುಮಾರು 119 ವರ್ಷಗಳ ಹಳೆಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಹಟ್ಟಿ ಪಟ್ಟಣ ಪಂಚಾಯಿತಿಯಲ್ಲಿ ಮೇಲ್ಛಾವಣಿ ರಂದ್ರಗಳಿಂದ ನೀರು ಸೋರುತ್ತಿದ್ದು, ಸಿಬ್ಬಂದಿ ಹಾಗೂ ಸಾರ್ವಜನಿಕರು ನಿತ್ಯ ಆತಂಕದ ವಾತಾವರಣದಲ್ಲಿ ಕೆಲಸ ಮಾಡುತ್ತಿದ್ದಾರೆ.

ಮಳೆಯಾದರೆ ಕಚೇರಿ ಒಳಗೆ ನೀರು ಹರಿದು ದಾಖಲೆಗಳು, ಕಂಪ್ಯೂಟರ್‌ಗಳು, ಪ್ರಿಂಟರ್‌ಗಳು ಹಾನಿಯಾಗುವ ಆತಂಕ ಎದುರಾಗಿದೆ. ಅಧಿಕಾರಿಗಳು ಉಪಕರಣಗಳ ಮೇಲೆ ಪ್ಲಾಸ್ಟಿಕ್ ಹಾಳೆ ಹಾಕಿ ಕಾಪಾಡಿಕೊಳ್ಳುತ್ತಿದ್ದಾರೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಕೊಠಡಿಗಳಲ್ಲೂ ನೀರು ಸೋರುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಂದಾಯ ವಿಭಾಗ ಸೇರಿದಂತೆ ಹಲವು ಕಚೇರಿಗಳಲ್ಲಿ ದಾಖಲೆಗಳು ಸುರಕ್ಷಿತವಾಗಿಲ್ಲ.

ಕಟ್ಟಡದ ಕಟ್ಟಿಗೆಗಳು ಕೊಳೆತು ಹೋಗಿದ್ದು, ಯಾವಾಗ ಕುಸಿಯುತ್ತವೋ ಅನ್ನೋ ಭಯದಲ್ಲೇ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಕಳ್ಳಕಾಕರು ಮೇಲ್ಛಾವಣಿಯಿಂದಲೇ ಒಳನುಗ್ಗುವ ಸಾಧ್ಯತೆ ಇದ್ದು, ಭದ್ರತೆ ಪ್ರಶ್ನಾರ್ಹವಾಗಿದೆ. ಜನರು ಸರ್ಕಾರದ ನಿರ್ಲಕ್ಷ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಜಿಲ್ಲಾ ನಗರಾಭಿವೃದ್ಧಿ ಕೋಶ ಅಧಿಕಾರಿಗಳು ಪ್ರತಿಕ್ರಿಯೆ ನೀಡುತ್ತಾ, “ಹೊಸ ಕಟ್ಟಡ ನಿರ್ಮಾಣಕ್ಕೆ ನಗರೋತ್ಥಾನ ಯೋಜನೆಯಲ್ಲಿ 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಆದರೆ ಸೂಕ್ತ ಜಾಗ ಸಿಕ್ಕಿಲ್ಲ. ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಿ ನಿರ್ಮಾಣ ಪ್ರಾರಂಭಿಸುತ್ತೇವೆ” ಎಂದು ತಿಳಿಸಿದ್ದಾರೆ.

ಆದರೆ, ಸರ್ಕಾರದಿಂದ ತಕ್ಷಣದ ಕ್ರಮ ಕೈಗೊಳ್ಳದಿದ್ದರೆ ಯಾವುದೇ ಅಪಘಾತ ಸಂಭವಿಸಬಹುದೆಂಬ ಆತಂಕ ಶಿರಹಟ್ಟಿ ನಾಗರಿಕರಲ್ಲಿ ವ್ಯಕ್ತವಾಗಿದೆ. ಸುರಕ್ಷಿತ ಕಟ್ಟಡಕ್ಕೆ ಕಚೇರಿ ಸ್ಥಳಾಂತರಿಸುವುದು ತುರ್ತು ಅಗತ್ಯವಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande