ಸರ್ಕಾರಿ ಕಚೇರಿಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಡ್ಡಾಯ
ಧಾರವಾಡ, 05 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಜಿಲ್ಲೆಯ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಅಕ್ಟೋಬರ್ 07, 2025 ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ ಮತ್ತು ಸಂಸ್ಥೆಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ರವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಪ್ರಭಾರ ಜಿಲ್ಲಾಧಿಕಾರಿ ಭುವನ
ಸರ್ಕಾರಿ ಕಚೇರಿಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಡ್ಡಾಯ


ಧಾರವಾಡ, 05 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಅಕ್ಟೋಬರ್ 07, 2025 ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ ಮತ್ತು ಸಂಸ್ಥೆಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ರವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಅವರು ನಿರ್ದೇಶಿಸಿದ್ದಾರೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ ಅವರು, ಅಕ್ಟೋಬರ್ 07, 2025 ರಂದು ಬೆಳಗ್ಗೆ 9 ಗಂಟೆಗೆ ತಮ್ಮ ಕಚೇರಿಗಳಲ್ಲಿ ಕಡ್ಡಾಯವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಸೂಚಿಸಿದ್ದಾರೆ.

ಅಕ್ಟೋಬರ 7 ರಂದು ಬೆಳಗ್ಗೆ 9 ಗಂಟೆಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವ ಚಿತ್ರದ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿಯಿಂದ ಟೋಲ್‍ನಾಕ ಹತ್ತಿರದ ಶ್ರೀ ಮಹರ್ಷಿ ವಾಲ್ಮೀಕಿ ದೇವಸ್ಥಾನಕ್ಕೆ ಆಗಮಿಸಿ, ಮಾಲಾರ್ಪಣೆ ಮಾಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande