ಹಗರಿಬೊಮ್ಮನಹಳ್ಳಿ : ಅಕ್ಟೋಬರ್ 7 ರಂದು ಶ್ರೀಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ
ಹಗರಿಬೊಮ್ಮನಹಳ್ಳಿ, 05 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಹಾಗೂ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ಸಹಯೋಗದಲ್ಲಿ ಅಕ್ಟೋಬರ್.07 ರಂದು ಬೆ.11:30 ಕ್ಕೆ ಶ್ರೀಮಹರ್ಷಿ ವಾಲ್ಮೀಕಿ ಭವನ ಹಗರಿಬೊಮ್ಮನಹಳ್ಳಿಯಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಜ
ಹಗರಿಬೊಮ್ಮನಹಳ್ಳಿ : ಅಕ್ಟೋಬರ್ 7 ರಂದು ಶ್ರೀಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ


ಹಗರಿಬೊಮ್ಮನಹಳ್ಳಿ, 05 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಹಾಗೂ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ಸಹಯೋಗದಲ್ಲಿ ಅಕ್ಟೋಬರ್.07 ರಂದು ಬೆ.11:30 ಕ್ಕೆ ಶ್ರೀಮಹರ್ಷಿ ವಾಲ್ಮೀಕಿ ಭವನ ಹಗರಿಬೊಮ್ಮನಹಳ್ಳಿಯಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಳ್ಳಾರಿ ಮತ್ತು ವಿಜಯನಗರ ಸಂಸದ ಈ.ತುಕಾರಾಮ್, ವಿಧಾನ ಪರಿಷತ್ ಶಾಸಕರಾದ ಚಂದ್ರಶೇಖರ್.ಬಿ.ಪಾಟೀಲ್, ಶಶೀಲ್.ಜಿ.ನಮೋಶಿ, ವೈ.ಎಂ.ಸತೀಶ್, ಪುರಸಭೆ ಅಧ್ಯಕ್ಷ ಎಂ.ಮರಿರಾಮಪ್ಪ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಗುರುಬಸವರಾಜ ಸೊನ್ನದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ತಹಶೀಲ್ದಾರಾದ ಆರ್.ಕವಿತಾ, ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಲಕ್ಷೀಕಾಂತ, ಪೊಲೀಸ್ ಆರಕ್ಷಕ ವೃತ್ತ ನಿರೀಕ್ಷಕ ವಿಕಾಸ್ ಲಮಾಣಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್ ಈ ದಿಡಗೂರು ಹಾಗೂ ಪುರಸಭೆ ಮುಖ್ಯಾಧಿಕಾರಿ ಎಂ.ಕೆ.ಮುಗುಳಿ ಅವರು ಸ್ವಾಗತಿಸಿದ್ದಾರೆ. ಗಂ.ಭೀ. ಸರ್ಕಾರಿ ಪದವಿ ಪೂರ್ವಕಾಲೇಜು ಪ್ರಾಂಶುಪಾಲರಾದ ಡಾ.ಎಂ.ಕೆ.ದುರುಗಪ್ಪ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಹಗರಿ ಆಂಜನೇಯ ದೇವಸ್ಥಾನದಿಂದ ಪ್ರಾರಂಭವಾಗಿ ಕೂಡ್ಲಿಗಿ ಸರ್ಕಲ್ ಮೂಲಕ ಶ್ರೀಮಹರ್ಷಿ ವಾಲ್ಮೀಕಿ ಭವನದ ವರಗೆ ಮೆರವಣಿಗೆ ಜರುಗಲಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande