ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನ
ಹುಬ್ಬಳ್ಳಿ, 05 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಸ್ವಯಂಸೇವಕ ಸಂಘ ಹುಬ್ಬಳ್ಳಿ ಮಹಾನಗರ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ವಿಜಯದಶಮಿ ಉತ್ಸವ ನಡೆಯಲಿದೆ. ಇಂದು ಮಧ್ಯಾಹ್ನ ನಡೆಯುವ ಪಥಸಂಚಲನದಲ್ಲಿ ಸುಮಾರು 7000 ಗಣವೇಷಧಾರಿ ಸ್ವಯಂಸೇವಕರು ಭಾಗವಹಿಸಲಿದ್ದಾರೆ. ನಗರದ ಪ್ರಮ
Rss


ಹುಬ್ಬಳ್ಳಿ, 05 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಾಷ್ಟ್ರೀಯ ಸ್ವಯಂಸೇವಕ ಸಂಘ ಹುಬ್ಬಳ್ಳಿ ಮಹಾನಗರ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ವಿಜಯದಶಮಿ ಉತ್ಸವ ನಡೆಯಲಿದೆ.

ಇಂದು ಮಧ್ಯಾಹ್ನ ನಡೆಯುವ ಪಥಸಂಚಲನದಲ್ಲಿ ಸುಮಾರು 7000 ಗಣವೇಷಧಾರಿ ಸ್ವಯಂಸೇವಕರು ಭಾಗವಹಿಸಲಿದ್ದಾರೆ. ನಗರದ ಪ್ರಮುಖ ಬೀದಿಗಳಲ್ಲಿ ಸಾಗುವ ಈ ಪಥಸಂಚಲನವು ರಾಷ್ಟ್ರಭಕ್ತಿ, ಶಿಸ್ತು ಮತ್ತು ಸಂಘಟನೆಯ ಶಕ್ತಿಯನ್ನು ಪ್ರತಿಬಿಂಬಿಸಲಿದೆ.

ಪಥಸಂಚಲನದ ನಂತರ ನಗರದ ನೆಹರು ಮೈದಾನದಲ್ಲಿ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದ್ದು ಆರ್ ಎಸ್ಎಸ್ ರಾಷ್ಟ್ರೀಯ ಸರ ಕಾರ್ಯವಾಹ ಕೃಷ್ಣ ಗೋಪಾಲ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

ಪಥಸಂಚಲನದ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತಾ ವ್ಯವಸ್ಥೆ ಬಲಪಡಿಸಲಾಗಿದ್ದು, ಪೊಲೀಸ್ ಇಲಾಖೆ ಸಂಚಾರ ನಿಯಂತ್ರಣ ಹಾಗೂ ಭದ್ರತೆಯ ಕ್ರಮಗಳನ್ನು ಕೈಗೊಂಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande