ಖ್ಯಾತ ಸಾಹಿತಿ ಮೊಗಳ್ಳಿ ಗಣೇಶ ನಿಧನ
ಬೆಂಗಳೂರು, 05 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಮೂವರು ಪುತ್ರಿಯರು ಇದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಸುಮಾ ರು 28 ವರ್ಷ ಪ್ರಾಧ್ಯಾಪಕರಾಗಿದ್ದ ಮೊಗಳ್ಳಿ ಗಣೇಶ್ ತಮ್ಮ ವಿಶಿಷ
Ganesh


ಬೆಂಗಳೂರು, 05 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಮೂವರು ಪುತ್ರಿಯರು ಇದ್ದಾರೆ.

ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಸುಮಾ ರು 28 ವರ್ಷ ಪ್ರಾಧ್ಯಾಪಕರಾಗಿದ್ದ ಮೊಗಳ್ಳಿ ಗಣೇಶ್ ತಮ್ಮ ವಿಶಿಷ್ಟ ಶೈಲಿಯ ಕಥೆಗಳ ಮೂಲಕ ಅವರು ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿದ್ದ ಅವರು ಹಲವಾರು ಕಾವ್ಯ ಸಂಕಲನಗಳ ಮೂಲಕ ಹೆಸರುವಾಸಿಯಾಗಿದ್ದರು.

ಪ್ರಬಲ ದಲಿತ ಚಿಂತಕರಾಗಿ, ದೇಶದ ಪ್ರತಿಷ್ಠತ ವಿಶ್ವವಿದ್ಯಾಲಯಗಳಿಗೆ ಆಹ್ವಾನಿತರಾಗಿ ತೆರಳಿ ವಿಶೇಷ ಉಪನ್ಯಾಸ ನೀಡುತ್ತಿದ್ದ ಗಣೇಶ, ಸದ್ಯ ಹಾವೇರಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರಾಗಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande