ಬೆಂಗಳೂರು, 05 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವಚನ ವಿಶ್ವ ವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 'ಬಸವ ಸಂಸ್ಕೃತಿ ಅಭಿಯಾನ-2025' ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ವಚನ ವಿವಿ ಸ್ಥಾಪನೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಇದೇ ವೇಳೆ ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇವೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ ಬಸವ ಮೆಟ್ರೋ ಎಂದು ಘೋಷಿಸಿ ಬಿಡುತ್ತಿದ್ದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa