ಪ್ರತಿಕೂಲ ಹವಾಮಾನದಿಂದಾಗಿ ವೈಷ್ಣೋದೇವಿ ಯಾತ್ರೆ ಸ್ಥಗಿತ
ಜಮ್ಮು, 05 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದಲ್ಲಿ ಹವಾಮಾನ ವೈಪರೀತ್ಯದ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ, ವೈಷ್ಣೋದೇವಿ ಯಾತ್ರೆಯನ್ನು ಇಂದಿನಿಂದ ಅಕ್ಟೋಬರ್ 7 ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಯಾತ್ರೆ ಅಕ್ಟೋಬರ್ 8 ರಿಂದ ಪುನರಾರಂಭವಾಗಲಿದೆ ಎಂದು ಯಾತ್ರಾ ನಿರ್
ಪ್ರತಿಕೂಲ ಹವಾಮಾನದಿಂದಾಗಿ ವೈಷ್ಣೋದೇವಿ ಯಾತ್ರೆ ಸ್ಥಗಿತ


ಜಮ್ಮು, 05 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದಲ್ಲಿ ಹವಾಮಾನ ವೈಪರೀತ್ಯದ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ, ವೈಷ್ಣೋದೇವಿ ಯಾತ್ರೆಯನ್ನು ಇಂದಿನಿಂದ ಅಕ್ಟೋಬರ್ 7 ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಯಾತ್ರೆ ಅಕ್ಟೋಬರ್ 8 ರಿಂದ ಪುನರಾರಂಭವಾಗಲಿದೆ ಎಂದು ಯಾತ್ರಾ ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಹವಾಮಾನ ಇಲಾಖೆ, ನಾಗರಿಕರಿಗೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಮತ್ತು ಸಂಭಾವ್ಯ ಪ್ರವಾಹ ಅಥವಾ ನೀರಿನ ಅಡಚಣೆಗಳ ಬಗ್ಗೆ ಎಚ್ಚರಿಕೆಯಿಂದಿರಲು ಸೂಚಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಹವಾಮಾನವು ಪ್ರತಿಕೂಲವಾಗಿರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಭಾರಿ ಮಳೆಯ ಸಾಧ್ಯತೆಯ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಮತ್ತು ಶಾಲಾ ಸಿಬ್ಬಂದಿ ಸುರಕ್ಷತೆಗಾಗಿ ಜಮ್ಮು ವಿಭಾಗದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಅಕ್ಟೋಬರ್ 6 ಮತ್ತು 7 ರಂದು ಮುಚ್ಚುವಂತೆ ಶಿಕ್ಷಣ ನಿರ್ದೇಶಕ ಡಾ. ನಸೀಮ್ ಜವಾದ್ ಚೌಧರಿ ಆದೇಶಿಸಿದ್ದಾರೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಅಕ್ಟೋಬರ್ 5–7 ರವರೆಗೆ ಮೋಡ ಕವಿದ ವಾತಾವರಣ, ಹಗುರದಿಂದ ಮಧ್ಯಮ ಮಳೆ, ಗುಡುಗು ಸಹಿತ ಮಳೆ ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಎತ್ತರದ ಪ್ರದೇಶಗಳಲ್ಲಿ ಹಗುರದಿಂದ ಮಧ್ಯಮ ಹಿಮಪಾತವೂ ಸಂಭವಿಸಬಹುದು. ಜಮ್ಮು ವಿಭಾಗದಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಮಳೆ, ಕಾಶ್ಮೀರದಲ್ಲಿ ಮಧ್ಯಮದಿಂದ ಭಾರೀ ಮಳೆ ಅಕ್ಟೋಬರ್ 6 ರಂದು ಗರಿಷ್ಠವಾಗಲಿದೆ. ಅಕ್ಟೋಬರ್ 8 ರಂದು ಕೆಲ ಸ್ಥಳಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದ್ದು, ಅಕ್ಟೋಬರ್ 9 ರಿಂದ 14 ರವರೆಗೆ ಸಾಮಾನ್ಯವಾಗಿ ಶುಷ್ಕ ಹವಾಮಾನ ಇರುವ ಸಾಧ್ಯತೆ ಇದೆ. ರೈತರಿಗೆ ಕೋಯ್ಲು ಮತ್ತು ಇತರ ಕೃಷಿ ಚಟುವಟಿಕೆಗಳನ್ನು ಮುಂದೂಡಲು ಹವಾಮಾನ ಇಲಾಖೆ ಸೂಚಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande