ಮಡಿಕೇರಿ, 05 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಹಿರಿಯ ನಾಗರಿಕರು ನಮ್ಮ ಆಶೋತ್ತರಗಳು. ನಮ್ಮ ಯೋಗಕ್ಷೇಮ ಮತ್ತು ನಮ್ಮ ಹಕ್ಕುಗಳನ್ನು ಸ್ಥಳೀಯ ಮತ್ತು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬಲ್ಲ ಸಶಕ್ತರು’ ಎಂಬ ಘೋಷವಾಕ್ಯದೊಂದಿಗೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯು ಅಕ್ಟೋಬರ್, 09 ರಂದು ಬೆಳಗ್ಗೆ 10.30 ಗಂಟೆಗೆ ಮಡಿಕೇರಿ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa