ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ
ಹೊಸಪೇಟೆ, 06 ಅಕ್ಟೋಬರ್(ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಪಿಯುಸಿ, ಡಿಪ್ಲೋಮಾ, ಪದವಿ ಸ್ನಾತಕೋತ್ತರ, ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್
ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ


ಹೊಸಪೇಟೆ, 06 ಅಕ್ಟೋಬರ್(ಹಿ.ಸ.) :

ಆ್ಯಂಕರ್ : 2025-26 ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಪಿಯುಸಿ, ಡಿಪ್ಲೋಮಾ, ಪದವಿ ಸ್ನಾತಕೋತ್ತರ, ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ವಿದ್ಯಾರ್ಥಿಗಳ ಶುಲ್ಕ ಮರುಪಾವತಿಗೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಾವೇದ್ ಕರಂಗಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ನವೆಂಬರ್.30 ರೊಳಗಾಗಿ ಎಸ್‍ಎಸ್‍ಪಿ https://ssp.postmatric.karnataka.gov.in/ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

ವಿದ್ಯಾರ್ಥಿಯು ಕಳೆದ ಸೆಮಿಸ್ಟರ್, ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆದಿರಬೇಕು. ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ.) ಸಮುದಾಯಕ್ಕೆ ಸೇರಿದವರಾಗಿರಬೇಕು. ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು ಎನ್‍ಪಿಸಿಐ ಮ್ಯಾಪಿಂಗ್ ಆಕ್ಟಿವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ http://dom.karnataka.gov.in ವೆಬ್ ಸೈಟ್ ಅನ್ನು ವೀಕ್ಷಿಸಿ, ಮಾಹಿತಿಗಾಗಿ ಜಿಲ್ಲಾ ಕಚೇರಿ ಮತ್ತು ಜಿಲ್ಲಾ ಹಾಗೂ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದಾಗಿದೆ.

ಸಹಾಯವಾಣಿ 8277799990 (24*7), ದೂ. 8050435366, 9980237242, 7353696984, 849492781 ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ತಿಳಿಯಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande