ಜಾನಪದ ಕಲಾ ತಂಡಗಳಿಂದ ಅರ್ಜಿ ಆಹ್ವಾನ
ರಾಯಚೂರು, 06 ಅಕ್ಟೋಬರ್(ಹಿ.ಸ.) : ಆ್ಯಂಕರ್ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ರಾಷ್ಟೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಾನಪದ ಕಲಾ ಪ್ರದರ್ಶನದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಅರ್ಹ ಜಾನಪದ ಕ
ಜಾನಪದ ಕಲಾ ತಂಡಗಳಿಂದ ಅರ್ಜಿ ಆಹ್ವಾನ


ರಾಯಚೂರು, 06 ಅಕ್ಟೋಬರ್(ಹಿ.ಸ.) :

ಆ್ಯಂಕರ್ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ರಾಷ್ಟೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಾನಪದ ಕಲಾ ಪ್ರದರ್ಶನದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಅರ್ಹ ಜಾನಪದ ಕಲಾ ತಂಡಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ತಂಡಗಳು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಸಂಗೀತ ಮತ್ತು ನಾಟಕ ಅಕಾಡೆಮಿ ಅಡಿಯಲ್ಲಿ ನೋಂದಣಿಯಾಗಿ ಈಗಾಗಲೇ ಸರ್ಕಾರಿ ಕಾರ್ಯಕ್ರಗಳ ಅನುμÁ್ಠನದಲ್ಲಿ ಜಾನಪದ ಕಲಾತಂಡದ ಮೂಲಕ ಪ್ರದರ್ಶನವನ್ನು ನೀಡಿರುವ ತಂಡಗಳು ಐ.ಇ.ಸಿ ವಿಭಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಕಚೇರಿ ಸಮಯದಲ್ಲಿ ಅರ್ಜಿ ಪಡೆದು ಅಕ್ಟೋಬರ್ 16ರ 5.30ಗಂಟೆಯೊಳಗಾಗಿ ಸಲ್ಲಿಸಬಹುದಾಗಿದೆ.

ಮಾನದಂಡಗಳು : ಕಲಾ ತಂಡವು ರಾಯಚೂರು ಜಿಲ್ಲೆಯ ವಿಳಾಸದೊಂದಿಗೆ ಸಹಕಾರ ಸಂಘಗಳ ಸಹಾಯಕ ನಿಬಂಧಕರಲ್ಲಿ ನೋಂದಣಿಯಾಗಿರಬೇಕು. ಕಲಾತಂಡವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ / ವಾರ್ತಾ ಇಲಾಖೆ/ ಸಂಗೀತ ಮತ್ತು ನಾಟಕ ಅಕಾಡೆಮಿಯಲ್ಲಿ ನೋಂಣಿಯಾಗಿರಬೇಕು. ಕಲಾ ತಂಡದ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿರಬೇಕು. ಕಲಾತಂಡ ಸದಸ್ಯರು ಬ್ಯಾಂಕನಲ್ಲಿ ಖಾತೆಯನ್ನು ಹೊಂದಿರಬೇಕು. ಕಳೆದ 2 ವರ್ಷಗಳಲ್ಲಿ ಆರೋಗ್ಯ ಇಲಾಖೆಯ ಕಾರ್ಯಕ್ರಗಳ ಕುರಿತು ಜಾಗೃತಿ ಮೂಡಿಸಿರಬೇಕು. ಕಳೆದ 2 ವರ್ಷಗಳಲ್ಲಿ ಇತರೇ ಸರಕಾರಿ ಇಲಾಖೆಯ ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸಿರಬೇಕು. ಪ್ರತಿ ತಂಡದಲ್ಲಿ ಕಡ್ಡಾಯವಾಗಿ 8 ಜನ ಕಲಾವಿಧರು ಇರತಕ್ಕದ್ದು, ಅದರಲ್ಲಿ ಕಡ್ಡಾಯವಾಗಿ 2 ಮಹಿಳಾ ಕಲಾವಿಧರು ಇರಬೇಕು. ನಿಯಮನುಸಾರ ಇದ್ದ ತಂಡಗಳಿಗೆ ಜಿಲ್ಲಾ ಮಟ್ಟದಲ್ಲಿ ಆಯ್ಕೆ ಸಮಿತಿಯ ಉಪಸ್ಥಿತಿಯಲ್ಲಿ ಕಲಾ ಪ್ರದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸ್ಸಯ್ಯ, ಮೊಬೈಲ್ ಸಂಖ್ಯೆ: 9902411536ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande