ಹುಬ್ಬಳ್ಳಿ, 06 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಭಾರತೀಯ ಹತ್ತಿ ನಿಗಮ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕಪಾಸ್ ಕಿಸಾನ್ ಮೊಬೈಲ್ ಅಪ್ಲಿಕೇಶನ್ ಮೂಲಕ ಹತ್ತಿ ಖರೀದಿಯನ್ನು ಕೈಗೊಳ್ಳಲಿದೆ. 2025-26ನೇ ಸಾಲಿನ ಬೆಳೆ ವರ್ಷಕ್ಕೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹತ್ತಿಯನ್ನು ಮಾರಾಟ ಮಾಡಲು ಕಪಾಸ್ ಕಿಸಾನ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಹತ್ತಿ ರೈತರು ಸ್ವಯಂ ನೋಂದಣಿಗೆ ಅವಕಾಶ ನೀಡಲಾಗಿದೆ.
ರೈತರು ಅಕ್ಟೋಬರ್ 31 ರೊಳಗಾಗಿ ಸ್ವಯಂ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಎಂಎಸ್‌ಪಿ ಅಡಿಯಲ್ಲಿ ಖರೀದಿ ಕಾರ್ಯಾಚರಣೆ 2025 ರ ಅಕ್ಟೋಬರ್ 21 ರಿಂದ ಪ್ರಾರಂಭವಾಗಲಿವೆ. ಕರ್ನಾಟಕದ ರೈತರು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರು ತಮ್ಮ ಹತ್ತಿಯನ್ನು ಭಾರತೀಯ ಹತ್ತಿ ನಿಗಮಕ್ಕೆ ಮಾರಾಟ ಮಾಡಲು ಕಪಾಸ್ ಕಿಸಾನ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ಹತ್ತಿ ರೈತರು ನೋಂದಣಿ ಪ್ರಕ್ರಿಯೆಯನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಂತೆ ಭಾರತೀಯ ಹತ್ತಿ ನಿಗಮದ ಶಾಖಾ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa