ಆಹಾರ ಮತ್ತು ಔಷಧ ಸುರಕ್ಷತೆಗೆ ಹೆಚ್ಚಿನ ಆದ್ಯತೆ : ದಿನೇಶ್ ಗುಂಡೂರಾವ್
ಹಾಸನ, 06 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮಕ್ಕಳ ಆರೋಗ್ಯಕ್ಕೆ ಮಾರಕವಾಗಿರುವ ಕಾಫ್ ಸಿರಪ್ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಮಧ್ಯಪ್ರದೇಶದ ಘಟನೆ ಅತ್ಯಂತ ಆಘಾತಕಾರಿ. ಮಕ್ಕಳಿಗೆ ಔಷಧ ನೀಡುವಾಗ ಎಚ್ಚರಿಕೆ ವಹಿಸಬ
Gundu rao


ಹಾಸನ, 06 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮಕ್ಕಳ ಆರೋಗ್ಯಕ್ಕೆ ಮಾರಕವಾಗಿರುವ ಕಾಫ್ ಸಿರಪ್ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಮಧ್ಯಪ್ರದೇಶದ ಘಟನೆ ಅತ್ಯಂತ ಆಘಾತಕಾರಿ. ಮಕ್ಕಳಿಗೆ ಔಷಧ ನೀಡುವಾಗ ಎಚ್ಚರಿಕೆ ವಹಿಸಬೇಕು. ಈ ಹಿಂದೆ ಆರೋಗ್ಯ ಸುರಕ್ಷತೆಗೆ ಯಾರೂ ಗಮನ ಹರಿಸಿರಲಿಲ್ಲ, ಆದರೆ ನಮ್ಮ ಸರ್ಕಾರ ಆಹಾರ ಮತ್ತು ಔಷಧ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದರು.

ಸಿರಪ್ ತಯಾರಿಕೆ ಹಾಗೂ ಪೂರೈಕೆ ಕ್ರಮಗಳ ಪರಿಶೀಲನೆ ಕರ್ನಾಟಕದಲ್ಲಿ ಕೈಗೊಳ್ಳಲಾಗುತ್ತಿದೆ. “ರಾಜ್ಯದಲ್ಲಿನ ಮಾದರಿಗಳನ್ನು ಸಂಗ್ರಹಿಸಿ ತಪಾಸಣೆ ಮಾಡುತ್ತಿದ್ದೇವೆ. ಶೀಘ್ರದಲ್ಲೇ ವರದಿ ಲಭ್ಯವಾಗಲಿದೆ. ಯಾವುದೇ ಅಪಾಯದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಎಚ್ಚರಿಕೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಾಗುಪ್ತಾ ನೇತೃತ್ವದಲ್ಲಿ ಇಂದು ಸಭೆ ನಡೆಯಲಿದ್ದು ಸಭೆಯಲ್ಲಿ ಮಕ್ಕಳ ಸಿರಪ್ ಬಳಕೆಗೆ ಸಂಬಂಧಿಸಿದಂತೆ ನಿರ್ದಿಷ್ಟ ಮಾರ್ಗಸೂಚಿ ಮತ್ತು ಎಚ್ಚರಿಕೆ ಕ್ರಮಗಳನ್ನು ಚರ್ಚಿಸಿ ಮಾರ್ಗ ಸೂಚಿ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande