ಬೆಂಗಳೂರು, 06 ಅಕ್ಟೋಬರ್(ಹಿ.ಸ.) :
ಆ್ಯಂಕರ್ : ಮಧ್ಯ ಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಘಟನೆ ಬಳಿಕ ಎಚ್ಚೆತ್ತಿರುವ ರಾಜ್ಯ ಆರೋಗ್ಯ ಇಲಾಖೆ ಸಭೆ ನಡೆಸಿ ಕೆಮ್ಮಿನ ಸಿರಪ್ ಬಳಕೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಆರೋಗ್ಯ ಇಲಾಖೆ ಪ್ರಧಾನಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯ ನಂತರ ಇಲಾಖೆ ಮಾರ್ಗಸೂಚಿ ಹೊರಡಿಸಿದ್ದು, ೨ ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡಲು ನಿಷೇಧಿಸಿದೆ.
೨ ರಿಂದ ೫ ವರ್ಷದ ಮಕ್ಕಳಿಗೆ ತಜ್ಞರ ಸಲಹೆ ಮೇರೆಗೆ ಔಷಧಿ ನೀಡಬೇಕು. ಅಲ್ಲದೇ 5 ವರ್ಷ ಮೇಲ್ಪಟ್ಟ ಮಕ್ಕಳಿಗೆ ವೈದ್ಯರ ಸಲಹೆ ಮೇರೆಗೆ ಔಷಧಿ ನೀಡಬೇಕು ಎಂದು ತಿಳಿಸಿದೆ.
ವೈದ್ಯರ ಚೀಟಿ ಇಲ್ಲದೆ ಕೆಮ್ಮಿನ ಸಿರಪ್‌ಗಳನ್ನ ಖರೀದಿಸಬಾರದು, ಬಳಸಬಾರದು. ಈ ಹಿಂದೆ ಬಳಸಿದ ಔಷಧಿಗಳನ್ನ ಮರುಬಳಕೆ ಮಾಡಬಾರದು. ಕೆಮ್ಮು ಉಲ್ಬಣಗೊಂಡರೆ ವೈದ್ಯರನ್ನ ಸಂಪರ್ಕಿಸುವಂತೆ ಇಲಾಖೆ ಸೂಚಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa