ಬಂಗಾಳದಲ್ಲಿ ಜಂಗಲ್ ರಾಜ್ ಆಡಳಿತ : ಬಿಜೆಪಿ ಆರೋಪ
ನವದೆಹಲಿ, 06 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಬಂಗಾಳದ ಸಿಲಿಗುರಿ ಜಿಲ್ಲೆಯ ನಾಗರಕಟದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ಬಿಜೆಪಿ ಸಂಸದ ಹಾಗೂ ಶಾಸಕರ ಮೇಲಿನ ಹಲ್ಲೆಯನ್ನು ಬಿಜೆಪಿ ಖಂಡಿಸಿದೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, ತೃಣಮೂಲ ಕಾಂಗ್ರೆಸ್ ಬಂಗಾಳದಲ್
Bjp


ನವದೆಹಲಿ, 06 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಪಶ್ಚಿಮ ಬಂಗಾಳದ ಸಿಲಿಗುರಿ ಜಿಲ್ಲೆಯ ನಾಗರಕಟದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ಬಿಜೆಪಿ ಸಂಸದ ಹಾಗೂ ಶಾಸಕರ ಮೇಲಿನ ಹಲ್ಲೆಯನ್ನು ಬಿಜೆಪಿ ಖಂಡಿಸಿದೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, ತೃಣಮೂಲ ಕಾಂಗ್ರೆಸ್ ಬಂಗಾಳದಲ್ಲಿ ಜಂಗಲ್ ರಾಜ್ ಆಡಳಿತ ನಡೆಸುತ್ತಿದೆ, ಎಂದು ಆರೋಪಿಸಿದ್ದಾರೆ.

ಬುಡಕಟ್ಟು ಸಮುದಾಯದ ನಾಯಕ ಮತ್ತು ಮಾಲ್ಡಾ, ಉತ್ತರದ ಎರಡು ಬಾರಿ ಸಂಸದರಾಗಿರುವ ಖಗೇನ್ ಮುರ್ಮು ಅವರು ಪ್ರವಾಹ ಮತ್ತು ಭೂಕುಸಿತದಿಂದ ಬಾಧಿತರಾದ ಜನರಿಗೆ ನೆರವು ನೀಡಲು ಜಲ್ಪೈಗುರಿಯ ಡೂರ್ಸ್ ಪ್ರದೇಶದ ನಾಗರಕಟಕ್ಕೆ ತೆರಳಿದಾಗ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೋಲ್ಕತ್ತಾದಲ್ಲಿ ಕಾರ್ನೀವಲ್‌ನಲ್ಲಿ ನೃತ್ಯ ಮಾಡುತ್ತಿದ್ದರೆ, ರಾಜ್ಯದ ಆಡಳಿತ ಕಾಣೆಯಾಗಿತ್ತು. ಬಿಜೆಪಿಯ ನಾಯಕರು ಮಾತ್ರ ಪ್ರವಾಹ ಪೀಡಿತರಿಗೆ ನೆರವು ನೀಡಲು ಹೊರಟಿದ್ದರು. ಆದರೆ ಸಹಾಯ ಮಾಡಿದ್ದಕ್ಕಾಗಿ ಅವರ ಮೇಲೆಯೇ ಕಲ್ಲು ತೂರಾಟ ನಡೆದಿದೆ. ಇದು ತೃಣಮೂಲ ಕಾಂಗ್ರೆಸ್ ಆಡಳಿತದ ನಿಜಸ್ವರೂಪ, ಎಂದು ಮಾಳವೀಯ ಕಿಡಿಕಾರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande