ಬೆಂಗಳೂರು, 06 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಲಿಂಗಾಯತ ಪ್ರತ್ಯೇಕ ಧರ್ಮ ರಚನೆ ಕುರಿತು ಎದ್ದಿರುವ ಪರ ವಿರೋಧಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಂತರಂಗದ ಅಪೇಕ್ಷೆ ಬಹಿರಂಗಪಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲಾ ಸಮಾಜ, ಧರ್ಮಗಳನ್ನು ರಕ್ಷಿಸುವ ಕರ್ತವ್ಯ ಮುಖ್ಯಮಂತ್ರಿಗಳಿಗೆ ಇರಬೇಕಾಗುತ್ತದೆ ಎಂದರು. ಬಸವೇಶ್ವರರ ಹೆಸರನ್ನು ಮೆಟ್ರೋ ನಿಲ್ದಾಣಕ್ಕೆ ಇಡುವುದನ್ನು ಸ್ವಾಗತಿಸುತ್ತೇವೆ. ಆದರೆ, ಸಿದ್ದರಾಮಯ್ಯನವರ ಅಂತರಂಗದಲ್ಲಿ ಏನಿದೆ ಎಂಬುದನ್ನು ಬಹಿರಂಗ ಪಡಿಸಬೇಕೆಂದು ಆಗ್ರಹಿಸಿದ್ದಾರೆ.
ಪ್ರತ್ಯೇಕ ಧರ್ಮದ ಕೂಗು ಮತ್ತೆ ಮುನ್ನೆಲೆಗೆ ಬಂದಿರುವುದನ್ನು ಗಮನಿಸಿದ್ದೇನೆ ವೀರಶೈವ ಲಿಂಗಾಯತ ಅಥವಾ ಲಿಂಗಾಯತ ಧರ್ಮದ ಕೂಗು ಇವತ್ತು ಮುನ್ನೆಲೆಗೆ ಬಂದಿದ್ದು, ಅದರ ಹಿನ್ನೆಲೆಯಲ್ಲಿ ಇದ್ದು ಮಾತನಾಡುವವರು ಯಾರೆಂಬ ಅರಿವು ಸಮಾಜಕ್ಕೆ ಇದೆ ಎಂದರು.
ಹಿಂದೂ ಧರ್ಮವನ್ನು ರಕ್ಷಿಸಬೇಕಿದೆ. ಧರ್ಮ ಒಡೆಯುವ ದುಸ್ಸಾಹಸವನ್ನೂ ಗಮನಿಸಬೇಕಿದೆ. ಇದರ ಮಧ್ಯೆ ಸಮಾಜ ಒಗ್ಗೂಡಿಸುವ ಕೆಲಸ ಆಗಬೇಕಾಗಿದೆ. ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ಸಮಾಜ, ಒಕ್ಕಲಿಗ, ವೀರಶೈವ ಲಿಂಗಾಯತ ಸಮಾಜ, ಸೇರಿ ಎಲ್ಲಾ ಸಮಾಜಗಳಲ್ಲಿ ಆರ್ಥಿಕ- ಸಾಮಾಜಿಕ- ಶೈಕ್ಷಣಿಕವಾಗಿ ಹಿಂದುಳಿದವರು ಇದ್ದಾರೆ. ಎಲ್ಲ ಸಮಾಜಕ್ಕೆ ನ್ಯಾಯ ಕೊಡುವ ಕೆಲಸ ಆಗಬೇಕಾಗಿದ್ದು ಸಿದ್ದರಾಮಯ್ಯನವರಿಗೆ ಆತುರವೇಕೆ ಎಂದು ಪ್ರಶ್ನಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa