ಪಂಚ ಗ್ಯಾರಂಟಿ : ಫಲಾನುಭವಿಗಳ, ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ
ಗದಗ, 06 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಎಲ್ಲ ಅರ್ಹ ಫಲಾನುಭವಿಗಳನ್ನು ಯೋಜನೆ ವ್ಯಾಪ್ತಿಗೆ ತರಲು ಗದಗ ತಾಲೂಕ ಮಟ್ಟದಲ್ಲಿ ಗ್ರಾಮ ಪಂಚಾಯತ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪಲಾನುಭವಿಗಳ ಮತ್ತು ಸಾರ್ವಜನಿಕ ಅಹವಾ
ಪೋಟೋ


ಗದಗ, 06 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಎಲ್ಲ ಅರ್ಹ ಫಲಾನುಭವಿಗಳನ್ನು ಯೋಜನೆ ವ್ಯಾಪ್ತಿಗೆ ತರಲು ಗದಗ ತಾಲೂಕ ಮಟ್ಟದಲ್ಲಿ ಗ್ರಾಮ ಪಂಚಾಯತ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪಲಾನುಭವಿಗಳ ಮತ್ತು ಸಾರ್ವಜನಿಕ ಅಹವಾಲು ಸ್ವೀಕಾರ ಹಾಗೂ ಪರಿಹಾರ ಸಭೆ ಹಮ್ಮಿಕೊಳ್ಳಲಾಗಿದೆ.

ಗದಗ ತಾಲೂಕ ಪಂಚಾಯತ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಅವರ ನಿರ್ದೇಶನದ ಮೇರೆಗೆ ಈ ಕಾರ್ಯಕ್ರಮಗಳನ್ನು ವಿವಿಧ ಗ್ರಾಮ ಪಂಚಾಯತಗಳಲ್ಲಿ ಆಯೋಜಿಸಲಾಗುತ್ತಿದೆ.

ಕಾರ್ಯಕ್ರಮಗಳ ಉದ್ದೇಶ ಸರ್ಕಾರದ ಜನಪರ ಯೋಜನೆಗಳು ಗ್ರಾಮ ಮಟ್ಟದಲ್ಲಿ ತಲುಪುವಂತೆ ಮಾಡುವುದು ಹಾಗೂ ಯಾವುದೇ ಅರ್ಹ ಫಲಾನುಭವಿಯು ಯೋಜನೆಯಿಂದ ಹೊರಗೊಳ್ಳದಂತೆ ಖಚಿತಪಡಿಸುವುದಾಗಿದೆ.

ಕಾರ್ಯಕ್ರಮಗಳು ಕೆಳಗಿನ ಗ್ರಾಮ ಪಂಚಾಯತಗಳಲ್ಲಿ ನಿಗದಿಪಡಿಸಲಾದ ದಿನಾಂಕಗಳಂದು ನಡೆಯಲಿವೆ:

ಅಕ್ಟೋಬರ್ ರಂದು 09 ರಂದು ಯಲಿಶಿರೂರು ಗ್ರಾಮ ಪಂಚಾಯತ ಕಾರ್ಯಾಲಯ ಬೆಳಿಗ್ಗೆ 10.30 ಗಂಟೆಗೆ, ಹರ್ತಿ ಗ್ರಾಮ ಪಂಚಾಯತ ಕಾರ್ಯಾಲಯ, ಮಧ್ಯಾಹ್ನ 3.00 ಗಂಟೆಗೆ.

ಅಕ್ಟೋಬರ್ ರಂದು 10 ರಂದು ನಾಗಾವಿ ಗ್ರಾಮ ಪಂಚಾಯತ ಕಾರ್ಯಾಲಯ ಬೆಳಿಗ್ಗೆ 10.30 ಗಂಟೆಗೆ, ಕಳಸಾಪೂರ ಗ್ರಾಮ ಪಂಚಾಯತ ಕಾರ್ಯಾಲಯ ಮಧ್ಯಾಹ್ನ 3.00 ಗಂಟೆಗೆ.

ಕಾರ್ಯಕ್ರಮಗಳಲ್ಲಿ ಪಂಚಾಯತದ ಜನಪ್ರತಿನಿಧಿಗಳು, ತಾಲೂಕ ಪಂಚಾಯತದ ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಗೂ ಸಂಬಂಧಪಟ್ಟ ಐದು ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಅವರು ಸಾರ್ವಜನಿಕರ ಪ್ರಶ್ನೆಗಳಿಗೆ ನೇರವಾಗಿ ಸ್ಪಂದಿಸಿ, ಯೋಜನೆಗಳ ಪ್ರಯೋಜನಗಳ ಕುರಿತು ಮಾಹಿತಿ ನೀಡಲಿದ್ದಾರೆ.

ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಯುವ ನಿಧಿ ಈ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಿದೆ. ಈ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಹಾಜರಾಗಿ, ಯೋಜನೆಗಳ ಉಪಯೋಗ ಪಡೆಯಲು ತಾ ಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande