ಹೊಸಪೇಟೆ, 06 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ಅರ್ಹ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಸ್ಟಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ) ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗಾಗಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 1 ರಿಂದ 8ನೇ ತರಗತಿ ಶಾಲೆಗಳ ವಿದ್ಯಾರ್ಥಿಗಳಿಗೆ (ಎಸ್‍ಎಸ್‍ಪಿ) ರಾಜ್ಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಾವೇದ್ ಕರೆಂಗಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ನವೆಂಬರ್.30 ರೊಳಗಾಗಿ https://ssp.postmatric.karnatka.gov.in ವೆಬ್ ಸೈಟ್ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಹತೆಗಳು ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ.) ಜನಾಂಗಕ್ಕೆ ಸೇರಿದವರಾಗಿರಬೇಕು. ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ ಪಾಲಕರ, ಪೆÇೀಷಕರ ಕುಟುಂಬದ ವಾರ್ಷಿಕ ಆದಾಯವು ರೂ.1.00 ಲಕ್ಷಗಳನ್ನು ಮೀರಿರಬಾರದು.
ವಿದ್ಯಾರ್ಥಿವೇತನ ಪಡೆಯಲು ಆನ್‍ಲೈನ್ ಅರ್ಜಿ ಸಲ್ಲಿಸುವುದು ಮತ್ತು ಆನ್‍ಲೈನ್ ಅರ್ಜಿಗಳನ್ನು ಸಂಬಂಧಪಟ್ಟ ಶಾಲೆಯ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರಿಗೆ ಸಲ್ಲಿಸಬೇಕು. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿ ಮತ್ತು ಎನ್‍ಪಿಸಿಐ ಮ್ಯಾಪ್ ಆಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು.
1ನೇ ತರಗತಿ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಕಳೆದ ವರ್ಷದಲ್ಲಿ ವಿದ್ಯಾರ್ಥಿ ವೇತನ ಮಂಜೂರಾದ ವಿದ್ಯಾರ್ಥಿಗಳ ಅರ್ಜಿಗಳನ್ನು ಸ್ವಯಂ ನವೀಕರಣ ಎಂದು ಪರಿಗಣಿಸಲಾಗುವುದರಿಂದ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ.
ಹಿಂದಿನ ವರ್ಷ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಮಂಜೂರಾಗದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್