ನ.03 ರಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ
ಧಾರವಾಡ, 06 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಯಶಸ್ವಿಯಾಗಿ 50 ವರ್ಷಗಳನ್ನು ಪೂರೈಸಿದ್ದು, ಮಂಡಳಿಯ ಸುವರ್ಣಮಹೋತ್ಸವ ಕಾರ್ಯಕ್ರಮವನ್ನು ಸಾರ್ವಜನಿಕ ಜಾಗೃತಿ ಹಾಗೂ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ನವೆಂಬರ್ 03 ರಂದು ಹುಬ್ಬಳ್ಳಿಯಲ್ಲಿ ಆಚರಿಸಲು ನಿ
Dc


ಧಾರವಾಡ, 06 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಯಶಸ್ವಿಯಾಗಿ 50 ವರ್ಷಗಳನ್ನು ಪೂರೈಸಿದ್ದು, ಮಂಡಳಿಯ ಸುವರ್ಣಮಹೋತ್ಸವ ಕಾರ್ಯಕ್ರಮವನ್ನು ಸಾರ್ವಜನಿಕ ಜಾಗೃತಿ ಹಾಗೂ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ನವೆಂಬರ್ 03 ರಂದು ಹುಬ್ಬಳ್ಳಿಯಲ್ಲಿ ಆಚರಿಸಲು ನಿರ್ಧರಿಸಲಾಗಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕೆಂದು ಧಾರವಾಡ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿ ಆಗಿರುವ ಜಿಪಂ. ಸಿಇಓ ಭುವನೇಶ ಪಾಟೀಲ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣಮಹೋತ್ಸವ ಸಮಾರಂಭ ಆಚರಿಸುವ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಈಗ ಯಶಸ್ವಿಯಾಗಿ 50 ವರ್ಷ ಪೂರೈಸಿದ್ದು, ಸುವರ್ಣಮಹೋತ್ಸವ ಕಾರ್ಯಕ್ರಮವನ್ನು ವಿವಿಧ ಸಮುದಾಯಗಳನ್ನು ತೊಡಗಿಸಿಕೊಂಡು, ಜಾಗೃತಿ ಮೂಡಿಸಲು ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಸುವರ್ಣಮಹೋತ್ಸವ ಕಾರ್ಯಕ್ರಮದ ಮೂಲಕ ಮಂಡಳಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು, ಪರಿಸರ ಸಂರಕ್ಷಣಾ ಕಾನೂನುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನದ ಬಗ್ಗೆ ತಿಳುವಳಿಕೆ ಮೂಡಿಸಬೇಕು. ಈ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುತ್ತದೆ ಎಂದು ಅವರು ಹೇಳಿದರು.

ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ನವೆಂಬರ್ 03 ರಂದು ಮಧ್ಯಾಹ್ನ 2 ಗಂಟೆಗೆ ಆಯೋಜಿಸಲು ನಿರ್ಧರಿಸಲಾಗಿದೆ. ಇದರೊಂದಿಗೆ ಪ್ರತಿ ತಾಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಸುವರ್ಣಮಹೋತ್ಸವ ಕಾರ್ಯಕ್ರಮ ಆಯೋಜಿಸಬೇಕು. ಮಾಲಿನ್ಯ ಮಂಡಳಿಯ ಅಧಿಕಾರಿಗಳು ತಾಲೂಕು ಆಡಳಿತದೊಂದಿಗೆ ಸಮನ್ವಯ ಸಾಧಿಸಿ, ಅಚ್ಚುಕಟ್ಟಾಗಿ ಕಾರ್ಯಕ್ರಮ ಸಿದ್ಧಪಡಿಸಿಕೊಳ್ಳಬೇಕೆಂದು ಅವರು ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande