ಮೈದಾನ ಬ್ಯಾಟಿಂಗ್‌ಗೆ ಸುಲಭವಾಗಿರಲಿಲ್ಲ : ಹರ್ಮನ್‌ಪ್ರೀತ್
ಮಹಿಳಾ ವಿಶ್ವಕಪ್‌–2025: ಪಾಕಿಸ್ತಾನ ವಿರುದ್ಧ ಭಾರತದ ಭರ್ಜರಿ ಗೆಲುವು
Wwc


ಕೊಲಂಬೊ, 06 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : 2025ರ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತ ಮಹಿಳಾ ತಂಡ ಪಾಕಿಸ್ತಾನವನ್ನು 88 ರನ್‌ಗಳಿಂದ ಸೋಲಿಸಿ ಸತತ ಎರಡನೇ ಗೆಲುವು ದಾಖಲಿಸಿದೆ.

ಭಾರತವು ಮೊದಲು ಬ್ಯಾಟಿಂಗ್ ಮಾಡಿ 8 ವಿಕೆಟ್ ನಷ್ಟಕ್ಕೆ 247 ರನ್ ಗಳಿಸಿತು. ರಿಚಾ ಘೋಷ್ ಕೊನೆಯಲ್ಲಿ 20 ಎಸೆತಗಳಲ್ಲಿ ಅಜೇಯ 35 ರನ್ ಗಳಿಸಿ ತಂಡದ ಮೊತ್ತವನ್ನು ಉತ್ತುಂಗಕ್ಕೆ ಕೊಂಡೊಯ್ದರು.

ಬೌಲಿಂಗ್ ವಿಭಾಗದಲ್ಲಿ ಕ್ರಾಂತಿ ಗೌಡ್ ಮಿಂಚಿ 20 ರನ್‌ಗೆ 3 ವಿಕೆಟ್‌ಗಳನ್ನು ಪಡೆದು ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದರು.

ಪಂದ್ಯದ ನಂತರ ನಾಯಕಿ ಹರ್ಮನ್‌ಪ್ರೀತ್ ಕೌರ್ ಮಾತನಾಡಿ ಈ ಪಿಚ್‌ನಲ್ಲಿ ಬ್ಯಾಟಿಂಗ್ ಸುಲಭವಾಗಿರಲಿಲ್ಲ. ಕೊನೆಯ ಓವರ್‌ಗಳವರೆಗೂ ವಿಕೆಟ್‌ಗಳನ್ನು ಕಾಪಾಡಿಕೊಳ್ಳುವುದು ನಮ್ಮ ಯೋಜನೆಯಾಗಿತ್ತು ಎಂದರು.

ಫೀಲ್ಡಿಂಗ್ ಕುರಿತು ಮಾತನಾಡಿ, ನಾವು ಕೆಲವು ಕ್ಯಾಚ್‌ಗಳನ್ನು ಕೈಚೆಲ್ಲಿದೆವು. ಸುಧಾರಣೆ ಅಗತ್ಯವಿದೆ, ಆದರೆ ಗೆಲುವು ಸಂತೋಷ ನೀಡಿದೆ ಎಂದರು.

ಭಾರತ ತನ್ನ ಮುಂದಿನ ಪಂದ್ಯವನ್ನು ಅಕ್ಟೋಬರ್ 9ರಂದು ದಕ್ಷಿಣ ಆಫ್ರಿಕಾ ವಿರುದ್ಧ ಹಾಗೂ ಅಕ್ಟೋಬರ್ 12ರಂದು ಆಸ್ಟ್ರೇಲಿಯಾ ವಿರುದ್ಧ ವಿಶಾಖಪಟ್ಟಣನಲ್ಲಿ ಆಡಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande