ಕೊಪ್ಪಳ, 06 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ನವೆಂಬರ್ ತಿಂಗಳಲ್ಲಿ ಯಾವುದೇ ಕ್ರಾಂತಿ ನಡೆಯವುದೂ ಇಲ್ಲ. ಈ ಬಗ್ಗೆ ಯಾರಲ್ಲೂ ಭ್ರಾಂತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಬಸಾಪುರದ ಮಿನಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಯಲ್ಲಿ ಸೋಮವಾರ ಮಾತನಾಡಿದ ಅವರು, ರಾಜಕೀಯದಲ್ಲಿ ಯಾವ ಕ್ರಾಂತಿಯೂ ಆಗೋದಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನವೆಂಬರ್‍ನಲ್ಲಿ ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಕ್ರಾಂತಿ ಆಗಲಿದೆ ಎಂದು ಹೇಳಿದ್ದರು. ಎಲ್ಲವೂ ಅಲ್ಲೋಲ ಕಲ್ಲೋಲ ಆಗಲಿದೆ ಎಂದು ಹೇಳಿದ್ದರು. ಏನೂ ಆಗಲಿಲ್ಲ. ಈಗಲೂ ಅಷ್ಟೇ ಎಂದು ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್