ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರ ಸಭೆ
ಬೆಂಗಳೂರು, 06 ಅಕ್ಟೋಬರ್(ಹಿ.ಸ.) : ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಧಾನ ಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರೊಂದಿಗೆ ಇಲಾಖೆಯ ಯೋಜನೆಗಳ ಕುರಿತು ಚರ್ಚೆ ನಡೆಸಿದರು. ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪ
Meeting


ಬೆಂಗಳೂರು, 06 ಅಕ್ಟೋಬರ್(ಹಿ.ಸ.) :

ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಧಾನ ಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರೊಂದಿಗೆ ಇಲಾಖೆಯ ಯೋಜನೆಗಳ ಕುರಿತು ಚರ್ಚೆ ನಡೆಸಿದರು.

ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪನೆ, ನವೆಂಬರ್ 19ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ (ಐಸಿಡಿಎಸ್) ಸುವರ್ಣ ಮಹೋತ್ಸವ ಆಚರಣೆ, ಅಕ್ಕಪಡೆ ಸ್ಥಾಪನೆ, ಸಾಂತ್ವನ ಯೋಜನೆ ಹಾಗೂ ಒನ್ ಸ್ಟಾಪ್ ಸೆಂಟರ್ ಕುರಿತು ಚರ್ಚೆ ನಡೆಸಿದರು.

ಇದೇ ವೇಳೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾರ್ಯಕ್ರಮದ ರೂಪುರೇಷೆ, ಕಾರ್ಯಕ್ರಮದ ಪೂರ್ವ ಸಿದ್ಧತೆಗಳ ಬಗ್ಗೆಯೂ ಚರ್ಚೆ ನಡೆಯಿತು

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಹಣಕಾಸು ಇಲಾಖೆಯ ಕಾರ್ಯದರ್ಶಿ ರಿಜಿಜು, ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಸ್.ಬಿ.ಶೆಟ್ಟೆಣ್ಣನವರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು,‌ ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande