ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ ದುರಂತಗಳ ಸರಮಾಲೆ
ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ ದುರಂತಗಳ ಸರಮಾಲೆ
ಚಿತ್ರ - ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್ ನಲ್ಲಿ ಬಂಗಾರಪೇಟೆ ಸಮೀಪ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡವರನ್ನು ಕೆಜಿಎಫ್ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.


ಕೋಲಾರ, 0೭ ಅಕ್ಟೋಬರ್ (ಹಿ.ಸ) :

ಆ್ಯಂಕರ್ : ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್ ಸಾವಿನ ಮನೆಯಾಗಿದೆ. ವಾರದಲ್ಲಿ ಎರಡು ಮೂರು ಪ್ರಾಣಾಂತಿಕ ಅಪಘಾತಗಳು ಸಂಭವಿಸಿ ಸಾವು ನೋವು ಉಂಟಾಗುತ್ತಿವೆ.

ಅತಿ ವೇಗ ಮತ್ತು ಬೇಗನೆ ತಲುಪ ಬೇಕೆಂಬ ದಾವಂತದಲ್ಲಿ ಮೈಮರೆತು ವಾಹನಗಳನ್ನು ಚಲಾಯಿಸುವ ಕಾರಣ ಎಕ್ಸ್‌ಪ್ರೆಸ್ ಕಾರಿಡಾರ್‌ನಲ್ಲಿ ದುರಂತರಗಳು ಒಂದರ ಹಿಂದೆ ಒಂದು ಸಂಭವಿಸುತ್ತಿವೆ.

ಭಾನುವಾರ ಕಾರು ಅಪಘಾತಗೊಂಡು ಎತ್ತರದ ರಸ್ತೆಯಿಂದ ಕೆಳಗೆ ಬಿದ್ದು ಕಾರು ಚಲಾಯಿಸುತ್ತಿದ್ದ ವ್ಯಕ್ತ ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿದ್ದಾರೆ.

ಇದರ ಬೆನ್ನಲ್ಲೇ ಸೋಮವಾರ ಬುಲ್ಯಾರೋ ಮತ್ತು ಈಚರ್ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಬಂಗಾರಪೇಟೆ ತಾಲ್ಲೂಕಿನ ಕಲ್ಕೇರೆ ಸಮೀಪ ಸೋಮವಾರ ರಾತ್ರಿ ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್‌ನಲ್ಲಿ ಭೀಕರ ಅಪಘಾತ ಸಂಭವಿಸಿದೆ.

ರಸ್ತೆಯಲ್ಲಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಬುಲ್ಯಾರೋ ಗಾಡಿಗೆ ಹಿಂದಿನಿಂದ ಈಚರ್ ಗಾಡಿ ಗುದ್ದಿದ ರಭಸಕ್ಕೆ ತೀವ್ರವಾಗಿ ಹಾನಿಯಾಗಿದೆ. ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನಿಬ್ಬರು ಆಸ್ಪತ್ರೆಗೆ ಮಾರ್ಗದಲ್ಲಿ ಮೃತಪಟ್ಟಿದ್ದಾರೆ.

ಅಲ್ಲದೆ ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್ ರಸ್ತೆ ಬದಿಯಲ್ಲಿ ಸಮೀಕ್ಷೆ ನಡೆಸುತ್ತಿದ್ದ ಸರ್ವೆಯರ್ ಐಚರ್ ಗುದ್ದಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಗಾಯಗಾಳುಗಳನ್ನು ಬಂಗಾರಪೇಟೆ ಹಾಗೂ ಕೆಜಿಎಫ್ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಕೆಜಿಎಫ್ ಎಸ್‌ಪಿ ಹಾಗೂ ಡಿವೈಎಸ್‌ಪಿ ಮತ್ತು ಬಂಗಾರಪೇಟೆ ತಹಸೀಲ್ದಾರ್ ಸ್ಥಳಕ್ಕೆ ಬೇಟಿ ನೀಡಿದ್ದರು .

ಚಿತ್ರ - ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್ ನಲ್ಲಿ ಬಂಗಾರಪೇಟೆ ಸಮೀಪ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡವರನ್ನು ಕೆಜಿಎಫ್ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande