ಬಿಲಾಸ್ಪುರ, 7 ಅಕ್ಟೋಬರ್ (ಹಿ.ಸ.)
ಆ್ಯಂಕರ್:
ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಭೀಕರ ಭೂಕುಸಿತದ ಪರಿಣಾಮ ಖಾಸಗಿ ಬಸ್ ಒಂದು ಅವಶೇಷಗಳ ಅಡಿಯಲ್ಲಿ ಹೂತುಹೋಗಿರುವ ದುರಂತ ಸಂಭವಿಸಿದೆ. ಜಿಲ್ಲೆಯ ಝಂಡುತಾ ಉಪವಿಭಾಗದ ಬಾರ್ತಿ ಪ್ರದೇಶದ ಭಲ್ಲು ಸೇತುವೆ ಬಳಿ ಸಂಭವಿಸಿದ್ದು, ಇದುವರೆಗೂ 15 ಶವಗಳನ್ನು ಹೊರತೆಗೆಯಲಾಗಿದ್ದು, ಇನ್ನೂ ಹಲವರು ಕಾಣೆಯಾಗಿರುವ ಮಾಹಿತಿ ಲಭ್ಯವಾಗಿದೆ.
ಭಾರೀ ಮಳೆಯ ನಡುವೆ ಬೆಟ್ಟದಿಂದ ಬಸ್ ಮೇಲೆ ಬಿದ್ದ ದೊಡ್ಡ ಕಲ್ಲುಗಳು ಮತ್ತು ಮಣ್ಣಿನ ಅವಶೇಷಗಳಿಂದ ಬಸ್ ಸಂಪೂರ್ಣವಾಗಿ ಕುಸಿದುಹೋಗಿದೆ. ಅಪಘಾತದ ವೇಳೆಯಲ್ಲಿ ಬಸ್‌ನಲ್ಲಿ ಸುಮಾರು 30ರಿಂದ 35 ಪ್ರಯಾಣಿಕರು ಇದ್ದರೆಂದು ಅಂದಾಜಿಸಲಾಗಿದೆ. ಇಬ್ಬರು ಹುಡುಗಿಯರನ್ನು ಜೀವಂತವಾಗಿ ರಕ್ಷಿಸಲಾಗಿದೆ. ಸ್ಥಳೀಯರು, ಪೊಲೀಸ್ ಹಾಗೂ SDRF ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಅಪಘಾತದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದು, ಪಿಎಂಎನ್‌ಆರ್‌ಎಫ್ ನಿಧಿಯಿಂದ ಮೃತರ ಕುಟುಂಬಗಳಿಗೆ ₹2 ಲಕ್ಷ ಮತ್ತು ಗಾಯಾಳುಗಳಿಗೆ ₹50,000 ಪರಿಹಾರ ಘೋಷಿಸಿದ್ದಾರೆ. “ಸಂತ್ರಸ್ತ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಪಿಎಂ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದ ಮುಖ್ಯಮಂತ್ರಿ ಠಾಕೂರ್ ಸುಖ್ವಿಂದರ್ ಸಿಂಗ್ ಸುಖು ಅವರು ಕೂಡ ಘಟನೆಯ ಬಗ್ಗೆ ಸಂತಾಪ ಸೂಚಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. “ಸರ್ಕಾರ ಸಂತ್ರಸ್ತ ಕುಟುಂಬಗಳೊಂದಿಗೆ ನಿಂತಿದೆ, ಎಲ್ಲ ರೀತಿಯ ಸಹಾಯ ಒದಗಿಸಲಾಗುವುದು” ಎಂದು ಅವರು ಭರವಸೆ ನೀಡಿದ್ದಾರೆ.
ಭಾರೀ ಮಳೆ ಮತ್ತು ಕತ್ತಲೆಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡಚಣೆ ಉಂಟಾದರೂ, ರಕ್ಷಣಾ ತಂಡಗಳು ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ಪತ್ತೆಹಚ್ಚಲು ಶ್ರಮಿಸುತ್ತಿವೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa