ಬೆಂಗಳೂರು, 07 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಾತಿ ಗಣತಿ ನಿರೀಕ್ಷಿತ ಪ್ರಮಾಣದಲ್ಲಿ ನಡೆಯುತ್ತಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಯಣಸ್ವಾಮಿ ಆರೋಪಿಸಿದ್ದಾರೆ.
ಗಣತಿದಾರರಿಗೆ ಒದಗಿಸಿರುವ ತಂತ್ರಾಂಶಗಳು ಕೆಲಸ ಮಾಡುತ್ತಿಲ್ಲ. ಜಾತಿಗಣತಿ ಬಗ್ಗೆ ಸರ್ಕಾರ ತಪ್ಪು ಮಾಹಿತಿ ನೀಡುತ್ತಿದೆ ಎಂದಿರುವ ಅವರು, ಬಿಜೆಪಿ ಅಧಿಕಾರಾವಧಿಯಲ್ಲಿ ಪರಿಶಿಷ್ಟ ವರ್ಗಕ್ಕೆ ಹಂಚಿದ್ದ ಮೀಸಲಾತಿ ಕುರಿತು ಅಂದು ಸಿದ್ದರಾಮಯ್ಯ ಅವರು ಈ ಮೀಸಲಾತಿ ಊರ್ಜಿತವಾಗುವುದಿಲ್ಲ ಎಂದು ಸುಳ್ಳು ಹೇಳಿದ್ದರು. ಆದರೆ ಈಗಲೂ ಅದೇ ಮೀಸಲಾತಿ ಚಾಲ್ತಿಯಲ್ಲಿದೆ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa