ಚಿಕ್ಕಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮಾನತು
ಹಾಸನ, 07 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಚಿಕ್ಕಹಳ್ಳಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಿ.ಪಿ. ಮನು ಇವರು ಮಹೇಶ್ ಕೆ.ಕೆ. ಕೋನಾಪುರ ಗ್ರಾಮ, ಅರಕಲಗೂಡು ತಾಲ್ಲೂಕು ಇವರ ನಿವೇಶನ ಖಾತೆ ಸಂಖ್ಯೆ:52 ಮತ್ತು 206 ಕ್ಕೆ ಸಂಬಂಧಿಸಿದಂತೆ ಇ-ಸ್ವತ
ಚಿಕ್ಕಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮಾನತು


ಹಾಸನ, 07 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಚಿಕ್ಕಹಳ್ಳಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಿ.ಪಿ. ಮನು ಇವರು ಮಹೇಶ್ ಕೆ.ಕೆ. ಕೋನಾಪುರ ಗ್ರಾಮ, ಅರಕಲಗೂಡು ತಾಲ್ಲೂಕು ಇವರ ನಿವೇಶನ ಖಾತೆ ಸಂಖ್ಯೆ:52 ಮತ್ತು 206 ಕ್ಕೆ ಸಂಬಂಧಿಸಿದಂತೆ ಇ-ಸ್ವತ್ತು ವಿತರಣೆ ಮಾಡಲು ಹಣ ಪಡೆದಿರುವ ಮತ್ತು ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಹಿನ್ನಲೆಯಲ್ಲಿ ಹಾಗೂ 15ನೇ ಹಣಕಾಸು ಯೋಜನೆಯ ಅನುದಾನ ಮತ್ತು ನಿಧಿ-1, ನಿಧಿ-2 ರ ಅನುದಾನವನ್ನು ನಿಯಮ ಬಾಹಿರವಾಗಿ ವೆಚ್ಚ ಮಾಡಿರುವ ಬಗ್ಗೆ ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯತ್, ಅರಕಲಗೂಡು ಇವರು ತನಿಖೆ ನಡೆಸಿ ಸಲ್ಲಿಸಿರುವ ತನಿಖಾ ವರದಿಯನ್ವಯ ಇವರ ಮೇಲಿನ ಆರೋಪಗಳ ಕುರಿತು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಸಿ.ಪಿ. ಮನು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಚಿಕ್ಕಹಳ್ಳಿ ಗ್ರಾಮ ಪಂಚಾಯಿತಿ ಇವರನ್ನು ತಕ್ಷಣ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande