ಮನ್ ಕೀ ಬಾತ್ ವೀಕ್ಷಣೆಯಲ್ಲಿ ರಾಜ್ಯ ಅಗ್ರಸ್ಥಾನ ತಲುಪುವ ಸಂಕಲ್ಪ : ಬಿವೈವಿ
ಬೆಂಗಳೂರು, 07 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಬಿಜೆಪಿ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮನ್ ಕೀ ಬಾತ್ ವಿಶೇಷ ಸಭೆಯನ್ನು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ಪ್ರಧಾನಿಗಳ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ನಮ್ಮೆಲ್
Bjp


ಬೆಂಗಳೂರು, 07 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಬಿಜೆಪಿ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮನ್ ಕೀ ಬಾತ್ ವಿಶೇಷ ಸಭೆಯನ್ನು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು ಪ್ರಧಾನಿಗಳ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ನಮ್ಮೆಲ್ಲ ಕಾರ್ಯಕರ್ತರ ಪರಿಶ್ರಮದಿಂದ ದೇಶದಲ್ಲಿ ರಾಜ್ಯವು ನಾಲ್ಕನೇ ಸ್ಥಾನದಲ್ಲಿದ್ದು, ಮುಂಬರುವ ದಿನಗಳಲ್ಲಿ ಅಗ್ರಸ್ಥಾನಕ್ಕೇರುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಮಂಡಲ ಹಾಗೂ ಬೂತ್ ಮಟ್ಟದಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಮನ್ ಕೀ ಬಾತ್ ಕಾರ್ಯಕ್ರಮ ಆಯೋಜಿಸಿ ಯಶಸ್ವಿಗೊಳಿಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ , ರಾಜ್ಯ ಉಪಾಧ್ಯಕ್ಷರಾದ ಮಾಳವಿಕಾ ಅವಿನಾಶ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಮನ್ ಕೀ ಬಾತ್ ಸಂಚಾಲಕರು, ಸಹ ಸಂಚಾಲಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande