ಹಾಸನ, 07 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮಹರ್ಷಿ ವಾಲ್ಮೀಕಿ ಯವರು ಮಹಾ ಶ್ರೇಷ್ಠ ಕವಿ, ಇವರು ರಚಿಸಿದ ರಾಮಾಯಣ ಮಹಾಕಾವ್ಯ ಕೇವಲ ಒಂದು ಕಾವ್ಯ ಅಥವಾ ಗ್ರಂಥ ಅಷ್ಟೇ ಅಲ್ಲ, ಧರ್ಮ, ಸತ್ಯ, ನಿಷ್ಠೆಯಿಂದ ಕೂಡಿರುವ ಕಥೆಯಾಗಿದೆ ಎಂದು ಹಾಸನ ಸಂಸದ ಶ್ರೇಯಸ್ ಎಂ ಪಟೇಲ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾ ನಗರ ಪಾಲಿಕೆ ಸಹಯೋಗದಲ್ಲಿ ಇಂದು ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿಂದು ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಮಾರ್ಪಟ್ಟು, ಯಾವ ರೀತಿಯಲ್ಲಿ ಸಾಧನೆ ಮಾಡಬಹುದು ಎಂಬುದಕ್ಕೆ ನೈಜ ಉದಾಹರಣೆ ಮಹರ್ಷಿ ವಾಲ್ಮೀಕಿಯವರು ಎಂದು ತಿಳಿಸಿದರು.
ರಾಮಾಯಣದಂತಹ ಕೃತಿಯನ್ನು ಮಹರ್ಷಿ ವಾಲ್ಮೀಕಿ ಅವರು ರಚಿಸಿರುವುದು ಹೆಮ್ಮೆಯ ವಿಷಯ ಅವರು ಹಾಕಿಕೊಟ್ಟಿರುವ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕು ಎಂದು ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa