1.10 ಕೋಟಿ ರೂ. ವೆಚ್ಚದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ
ಬಳ್ಳಾರಿ, 07 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ನಗರದ ವಾಲ್ಮೀಕಿ ವೃತ್ತ(ಎಸ್.ಪಿ ವೃತ್ತ)ದಲ್ಲಿ 1.10 ಕೋಟಿ ರೂ. ವೆಚ್ಚದಲ್ಲಿ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿ ಪ್ರತಿಷ್ಠಾಪಿಸಲಾಗುವುದು ಹಾಗೂ ವೃತ್ತವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಬಳ್ಳಾರಿ ನಗರ ನಾರಾ ಭರತ್ ರೆಡ್ಡಿ ಅವರು ಹೇಳಿದ್ದಾರೆ.
1.10 ಕೋಟಿ ರೂ. ವೆಚ್ಚದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ


1.10 ಕೋಟಿ ರೂ. ವೆಚ್ಚದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ


1.10 ಕೋಟಿ ರೂ. ವೆಚ್ಚದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ


ಬಳ್ಳಾರಿ, 07 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ನಗರದ ವಾಲ್ಮೀಕಿ ವೃತ್ತ(ಎಸ್.ಪಿ ವೃತ್ತ)ದಲ್ಲಿ 1.10 ಕೋಟಿ ರೂ. ವೆಚ್ಚದಲ್ಲಿ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿ ಪ್ರತಿಷ್ಠಾಪಿಸಲಾಗುವುದು ಹಾಗೂ ವೃತ್ತವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಬಳ್ಳಾರಿ ನಗರ ನಾರಾ ಭರತ್ ರೆಡ್ಡಿ ಅವರು ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಖ್ಯಾತ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ಅವರ ಹಸ್ತ ವಿನ್ಯಾಸದಲ್ಲಿ ಪುತ್ಥಳಿಯು ಅರಳಲಿದೆ. ಶುಭ ದಿನದಂದು ರಾಜ್ಯದ ನಾನಾ ಭಾಗಗಳಿಂದ ಸಮುದಾಯದ ಜನರನ್ನು ಒಗ್ಗೂಡಿಸಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ಅದೇ ರೀತಿಯಾಗಿ ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಶಾಖಾ ಮಠ ಸ್ಥಾಪಿಸಲಾಗುವುದು. ಇದಕ್ಕಾಗಿ ವೈಯಕ್ತಿಕವಾಗಿ ಎರಡು ಎಕರೆ ಭೂಮಿ ನೀಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಮಾತನಾಡಿ, ಋಷಿ ಮತ್ತು ಕವಿ ಮಹರ್ಷಿ ವಾಲ್ಮೀಕಿ ಅವರ ಮಹಾ ಕಾವ್ಯವಾದ ರಾಮಾಯಣದ ಮೂಲಕ ಧರ್ಮಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ಅವರನ್ನು ಪೂಜಿಸಲಾಗುತ್ತದೆ ಎಂದರು.

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ ಸತ್ಯವು ಸದಾಚಾರ ಮತ್ತು ಧರ್ಮದ ಅಡಿಪಾಯ. ಧರ್ಮ ಎಂದರೆ ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಯನ್ನು ಗೌರವಿಸುವುದು ಎಂದು ತೋರ್ಪಡಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ 2024-25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿಭಾಗದಲ್ಲಿ ಅತ್ಯುತ್ತಮ ಅಂಕಗಳಿಸಿದ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಕೃಷಿ, ತೋಟಗಾರಿಕೆ ಕ್ಷೇತ್ರದಲ್ಲಿ ಸಾಧನೆಗೈದ ರೈತರನ್ನು ಸನ್ಮಾನಿಸಲಾಯಿತು. ಕಲೆ, ಸಾಹಿತ್ಯ-ಸಂಗೀತ ಕ್ಷೇತ್ರದಲ್ಲಿನ ಪರಿಣಿತರನ್ನು ಅಭಿನಂದಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande