ಮಹರ್ಷಿ ವಾಲ್ಮೀಕಿ ದೇಶ ಕಂಡ ಅಪರೂಪದ ಸಾಹಿತಿ : ಸಿದ್ದರಾಮಯ್ಯ
ಬೆಂಗಳೂರು, 07 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಾಮಾಯಣದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಶ್ರೀ ಮಹರ್ಷಿ ವಾಲ್ಮೀಕಿ ತಪೋವನ ದಲ್ಲಿರುವ ಶ್ರೀ ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಪ್ರತಿಮೆ ಗೆ ಮಾಲಾ
Cm


ಬೆಂಗಳೂರು, 07 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಾಮಾಯಣದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಶ್ರೀ ಮಹರ್ಷಿ ವಾಲ್ಮೀಕಿ ತಪೋವನ ದಲ್ಲಿರುವ ಶ್ರೀ ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಪ್ರತಿಮೆ ಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು. ವಾಲ್ಮೀಕಿ ಜಯಂತೋತ್ಸವದ ಮೂಲಕ ಅವರನ್ನುಸ್ಮರಿಸಲಾಗಿದೆ. ದೇಶ ಕಂಡ ಅಪರೂಪದ ಸಾಹಿತಿ. ರಾಮಾಯಣ ದಂತಹ ಮಹಾನ್ ಗ್ರಂಥದ ಕತೃ. ವಾಲ್ಮೀಕಿಯವರು ಶೂದ್ರ ಜನಾಂಗದಲ್ಲಿ ಜನಿಸಿದ್ದರೂ, ರಾಮಾಯಣದಂತಹ ಶ್ರೇಷ್ಠ ಗ್ರಂಥವನ್ನು ವಿಶ್ವಕ್ಕೆ ಪರಿಚಯಿಸಿದರು. ವಾಲ್ಮೀಕಿಯವರ ಪ್ರತಿಮೆಯನ್ನು 2017 ರಲ್ಲಿ ಸ್ಥಾಪಿಸಲಾಯಿತು. ವಾಲ್ಮೀಕಿ ಹಾಗೂ ಕನಕದಾಸರಂತಹ ಮಹಾನ್ ಸಂತರು ಸಮಾಜಮುಖಿಯಾಗಿ ಬದುಕಿದವರು. ಅವರು ಬೋಧಿಸಿದಂತೆ ಮಾನವೀಯ ಮೌಲ್ಯಗಳನ್ನು ಅನುಸರಿದವರು ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande