ಬಳ್ಳಾರಿ, 07 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಗರ ನಿವಾಸಿ ಶ್ರೀಮತಿ ಶಿವಾ ಪಾರ್ವತಮ್ಮ (83) ಅವರು ಮಂಗಳವಾರ ನಸುಕಿನಲ್ಲಿ ನಿಧನರಾಗಿದ್ದಾರೆ.
ಮೃತರಿಗೆ ಪತಿ ಬಳ್ಳಾರಿ ಜಿಲ್ಲೆಯ ಹಿರಿಯ ವಕೀಲರಾಗಿರುವ ಶಿವಾ ಚಂದ್ರಶೇಖರ, ಮಗಳು, ಇಬ್ಬರು ಪುತ್ರರು
ಇದ್ದಾರೆ.
ಮೃತರು ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆಯುತ್ತಿದ್ದರು. ಮೃತರ ಅಂತ್ಯಕ್ರಿಯೆಯು ಬುಧವಾರ ಬೆಳಗ್ಗೆ 10 ಗಂಟೆಯ ನಂತರ ಬಳ್ಳಾರಿಯ ವೀರಶೈವ ರುದ್ರಭೂಮಿಯಲ್ಲಿ ವೀರಶೈವ ವಿಧಿ ಸಂಪ್ರದಾಯಗಳ ಪ್ರಕಾರ ಗುರು - ಹಿರಿಯರ ಸಮ್ಮುಖದಲ್ಲಿ ನೆರವೇರಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ವೀರಶೈವ ವಿದ್ಯಾವರ್ಧಕ ಸಂಘದ ಆಜೀವ ಸದಸ್ಯರು, ವಕೀಲರು ಮತ್ತು ವಿವಿಧ ಸಂಘ-ಸಂಸ್ಥೆಗಳವರು ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ವಿಚರಗಳಿಗಾಗಿ : ಶಿವಾ ರಮೇಶ್, ಮಗ, ಮೊಬೈಲ್ ಸಂಖ್ಯೆ : +919481436700 ಗೆ ಸಂಪರ್ಕಿಸಲು ಕೋರಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್