ರಾಯ್ ಬರೇಲಿಯಲ್ಲಿ ಯುವಕನ ಹತ್ಯೆ ಮಾನವೀಯತೆಯ ಮೇಲಿನ ಕಪ್ಪು ಚುಕ್ಕೆ:ಕಾಂಗ್ರೆಸ್
ನವದೆಹಲಿ, 07 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಾಯ್ ಬರೇಲಿಯಲ್ಲಿ ದಲಿತ ಯುವಕ ಹರಿಓಂ ವಾಲ್ಮೀಕಿಯ ಹತ್ಯೆಯನ್ನು ಸಂವಿಧಾನ, ಸಾಮಾಜಿಕ ನ್ಯಾಯ ಮತ್ತು ಮಾನವೀಯತೆಯ ಮೂಲ ಚೈತನ್ಯದ ಮೇಲಿನ ದಾಳಿ ಎಂದು ಕಾಂಗ್ರೆಸ್ ಪಕ್ಷ ಹೇಳಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕ ಸಭೆಯ ಪ್ರತಿಪಕ್ಷ
Cong


ನವದೆಹಲಿ, 07 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಾಯ್ ಬರೇಲಿಯಲ್ಲಿ ದಲಿತ ಯುವಕ ಹರಿಓಂ ವಾಲ್ಮೀಕಿಯ ಹತ್ಯೆಯನ್ನು ಸಂವಿಧಾನ, ಸಾಮಾಜಿಕ ನ್ಯಾಯ ಮತ್ತು ಮಾನವೀಯತೆಯ ಮೂಲ ಚೈತನ್ಯದ ಮೇಲಿನ ದಾಳಿ ಎಂದು ಕಾಂಗ್ರೆಸ್ ಪಕ್ಷ ಹೇಳಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕ ಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಜಂಟಿ ಹೇಳಿಕೆ ನೀಡಿ, ರಾಯ್ ಬರೇಲಿ ಘಟನೆಯು ದೇಶದ ಸಾಂವಿಧಾನಿಕ ಚೌಕಟ್ಟು ಮತ್ತು ಪ್ರಜಾಪ್ರಭುತ್ವದ ಆದರ್ಶಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

ಭಾರತೀಯ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಭದ್ರತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಖಾತರಿಪಡಿಸುತ್ತದೆ. ಸಮಾಜದ ಅಂಚಿನಲ್ಲಿರುವ, ದುರ್ಬಲ ಮತ್ತು ತುಳಿತಕ್ಕೊಳಗಾದ ವರ್ಗಗಳ ಸಬಲೀಕರಣಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande