ಬೆಂಗಳೂರು, 07 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮುಂದಿನ ದಿನಗಳಲ್ಲಿ ಸಚಿವ ಸಂಪುಟ ಪುನರ್ ರಚನೆ ನಡೆಯುವ ಸಂದರ್ಭದಲ್ಲಿ ನಾಯಕ ಸಮುದಾಯದ ಶಾಸಕರಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಕುರಿತು ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ವೇಳೆ ವರಿಷ್ಠರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.
ಇದೇ ವೇಳೆ ಸರ್ವೋಚ್ಛ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಮುಖ್ಯ ನ್ಯಾಯಮೂರ್ತಿಯವರೇ ಈ ಘಟನೆಯನ್ನು ಕ್ಷಮಿಸಿದ್ದು, ಅವರ ದೊಡ್ಡ ಗುಣವನ್ನು ಬಿಂಬಿಸುತ್ತದೆ. ಆದರೆ ಇಂತಹ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಇದು ಮನುವಾದಿಗಳ ಕೈವಾಡವಾಗಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa