ಹುಲಗಿ ಪಾದಯಾತ್ರಿಗಳ ಮೇಲೆ ಬಸ್ ಹರಿದು ಮೂವರ ದುರ್ಮರಣ
ಕೊಪ್ಪಳ, 07 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯದ ಪಾದಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಬಸ್ ಹರಿದು ಮೂವರು ಮೃತಪಟ್ಟ ದುರಂತ ಘಟನೆ ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ–50ರಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಅನ್ನಪೂರ್ಣ (40), ಪ್ರಕ
Accident


ಕೊಪ್ಪಳ, 07 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯದ ಪಾದಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಬಸ್ ಹರಿದು ಮೂವರು ಮೃತಪಟ್ಟ ದುರಂತ ಘಟನೆ ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ–50ರಲ್ಲಿ ಸೋಮವಾರ ರಾತ್ರಿ ನಡೆದಿದೆ.

ಮೃತರನ್ನು ಅನ್ನಪೂರ್ಣ (40), ಪ್ರಕಾಶ್ (25) ಹಾಗೂ ಶರಣಪ್ಪ (19) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ನಾಲ್ವರು ಭಕ್ತರು ಗಾಯಗೊಂಡಿದ್ದು, ಅವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಗದಗ ಜಿಲ್ಲೆಯ ರೋಣ ತಾಲೂಕಿನ ತಳ್ಳಿಹಾಳ ಗ್ರಾಮದ ಭಕ್ತರು ಶನಿವಾರ ಪಾದಯಾತ್ರೆ ಪ್ರಾರಂಭಿಸಿ ದೇವಸ್ಥಾನ ತಲುಪಲು ಇನ್ನೂ ಕೆಲವೇ ಗಂಟೆಗಳ ದೂರದಲ್ಲಿದ್ದಾಗ ಈ ದುರಂತ ಸಂಭವಿಸಿದೆ. ಬಸ್ ಡಿಕ್ಕಿಯಿಂದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ಡಾ. ರಾಮ್ ಅರಸಿದ್ದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande