ತುಮಕೂರು, 07 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಗರದ ವಾಲ್ಮೀಕಿ ಭವನದಲ್ಲಿ ಆಯೋಜಿಸಿದ್ದ 'ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ' ಕಾರ್ಯಕ್ರಮವನ್ನು ಗೃಹ ಸಚಿವ ಜಿ.ಪರಮೇಶ್ವರ ಉದ್ಘಾಟಿಸಿ, ಮಹರ್ಷಿ ವಾಲ್ಮೀಕಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಗೌರವ ಸಮರ್ಪಣೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ, ಸುರೇಶ್ ಗೌಡ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಗೌಡ ಹಾಗೂ ವಾಲ್ಮೀಕಿ ಸಮಾಜದ ಹಿರಿಯ ಮುಖಂಡರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa