ಧಾರವಾಡ, 07 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಈ ದೇಶದ ವಾಲ್ಮೀಕಿ ಸಮುದಾಯ ವೀರ, ದೀರರಾಗಿದ್ದು, ಅನೇಕ ಕೋಟೆ, ನಾಡನ್ನು ಆಳಿದ ರಾಜ ವಂಶಜರು. ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರು ನಮಗೆಲ್ಲ ಆದರ್ಶಪ್ರಾಯರು. ಅವರಂತೆ ಸ್ವಾಭಿಮಾನಿ ಬದುಕು ನಮ್ಮದಾಗಬೇಕು ಎಂದು ವಿಧಾನ ಪರಿಷತ್ ನೂತನ ಸದಸ್ಯ ಎಫ್.ಎಚ್. ಜಕ್ಕಪ್ಪನವರ ಹೇಳಿದರು.
ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ರವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.
ಆದಿಕವಿ ಮಹರ್ಷಿ ಶ್ರೀ ವಾಲ್ಮೀಕಿಯವರನ್ನು ನಾವು ಭಾವನಾತ್ಮಕವಾಗಿ ಕಟ್ಟಿಕೊಳ್ಳಬೇಕು. ವಾಲ್ಮೀಕಿಯನ್ನು ಕಳ್ಳ, ದರೋಡೆಕೋರ ಅನ್ನುವುದು ತಪ್ಪು. ಅವರ ರಾಮಾಯಣ ಮಹಾಕಾವ್ಯದ ಸಾಧನೆ ಇಡೀ ಜನಾಂಗಕ್ಕೆ ಪ್ರೇರಣೆ ಆಗಬೇಕು ಎಂದು ಅವರು ಹೇಳಿದರು.
ಮಹರ್ಷಿ ವಾಲ್ಮೀಕಿ ಓರ್ವ ಪ್ರಕಾಂಡ ಪಂಡೀತ.
ರಾಮಾಯಣದಲ್ಲಿನ ಶ್ಲೋಕಗಳು, ಖಂಡಗಳು ವಾಲ್ಮೀಕಿಯವರ ಪಾಂಡಿತ್ಯವನ್ನು ತೋರಿಸಿದ್ದು, ಭಾರತದ ಘನತೆ, ಗೌರವವನ್ನು ಹೆಚ್ಚಿಸಿದೆ ಎಂದು ಅವರು ಹೇಳಿದರು.
ದೇಶದಲ್ಲಿ ಸುಮಾರು 18 ಕೋಟಿ ವಾಲ್ಮೀಕಿ ಸಮುದಾಯ ಇದೆ. ವಾಲ್ಮೀಕಿ ಸಮುದಾಯ, ತಳ ಸಮುದಾಯಗಳು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ ಬೆಳೆದು ಬರಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಜಾಗೃತರಾಗಬೇಕು ಎಂದು ವಿಧಾನ ಪರಿಷತ್ತ ಸದಸ್ಯ ಎಫ್.ಎಚ್.ಜಕ್ಕಪ್ಪನವರ ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa