ಸ್ವಚ್ಛ ವಿಧಾನ ಸಭೆ ಜನ ಜಾಗೃತಿ ಅಭಿಯಾನಕ್ಕೆ ಸ್ವಾಗತ
ವಿಜಯಪುರ, 07 ಅಕ್ಟೋಬರ್(ಹಿ.ಸ.) : ಆ್ಯಂಕರ್ : ಸಾಮಾಜಿಕ ಹೋರಾಟಗಾರ ನಾಗರಾಜ ಕಲಕುಟಗರ ಅವರು ರಾಜ್ಯದಲ್ಲಿ ಹಮ್ಮಿಕೊಂಡಿರುವ ಸ್ವಚ್ಛ ವಿಧಾನ ಸಭೆ ಜನ ಜಾಗೃತಿ ಅಭಿಯಾನ ನಿಮಿತ್ತ ಹಮ್ಮಿಕೊಂಡ ಪಾದಯಾತ್ರೆಯನ್ನು ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದ ಎದುರು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜ
ಸನ್ಮಾನ


ವಿಜಯಪುರ, 07 ಅಕ್ಟೋಬರ್(ಹಿ.ಸ.) :

ಆ್ಯಂಕರ್ : ಸಾಮಾಜಿಕ ಹೋರಾಟಗಾರ ನಾಗರಾಜ ಕಲಕುಟಗರ ಅವರು ರಾಜ್ಯದಲ್ಲಿ ಹಮ್ಮಿಕೊಂಡಿರುವ ಸ್ವಚ್ಛ ವಿಧಾನ ಸಭೆ ಜನ ಜಾಗೃತಿ ಅಭಿಯಾನ ನಿಮಿತ್ತ ಹಮ್ಮಿಕೊಂಡ ಪಾದಯಾತ್ರೆಯನ್ನು ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದ ಎದುರು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಹಾಗೂ ಮುಖಂಡರು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಭ್ರಷ್ಟಚಾರ ಮುಕ್ತ ಪಾರದರ್ಶಕ ಆಡಳಿತ ನೀಡುವುದು ನಮ್ಮ ರೈತ ಭಾರತ ಪಕ್ಷದ ಉದ್ದೇಶವಾಗಿದೆ. ಬಾಗಲಕೋಟೆಯ ನಾಗರಾಜ ಕಲಕುಟಗರ ಅವರು ಸ್ವಾತಂತ್ರ್ಯ, ಸಮಾನತೆ, ಪ್ರಜಾಪ್ರಭುತ್ವ ಉಳುವಿಗಾಗಿ ಭ್ರಷ್ಟಾಚಾರ ಮುಕ್ತ ಪಾರದರ್ಶಕ ಆಡಳಿತಕ್ಕಾಗಿ ಹಮ್ಮಿಕೊಂಡಿರುವ ಸ್ವಚ್ಛ ವಿಧಾನ ಸಭೆ ಅಭಿಯಾನವು ಜನಪರವಾಗಿದ್ದು, ಅವರ ಕಾರ್ಯ ಶ್ಲಾಘನೀಯ. ಈ ಅಭಿಯಾನಕ್ಕೆ ನಮ್ಮ ರೈತ ಭಾರತ ಪಕ್ಷ ಬೆಂಬಲಿಸುತ್ತದೆ ಎಂದರು. ಸಾಮಾಜಿಕ ಹೋರಾಟಗಾರ ಗಿರೀಶ ಕಲಘಟಗಿ ಇತರರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande